ಗುಜರಾತ್: ಮುರಿದ ಶತಮಾನದ ತೂಗುಸೇತುವೆ- ಮೃತರ ಸಂಖ್ಯೆ132ಕ್ಕೆ ಏರಿಕೆ

ಮೊರ್ಬಿ(ಗುಜರಾತ್‌): ಪಶ್ಚಿಮ ಗುಜರಾತ್‌ನ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಶತಮಾನದಷ್ಟು ಹಳೆಯ ತೂಗುಸೇತುವೆ ಭಾನುವಾರ ಸಂಜೆ ಮುರಿದು ಬಿದ್ದು 132 ಕ್ಕೂ ಹೆಚ್ಚೂ ಮಂದಿ ಮೃತಪಟ್ಟಿದ್ದಾರೆ. ಇನ್ನೂ 80 ಮಂದಿ ನದಿಯಲ್ಲಿ ಸಿಲುಕಿದ್ದಾರೆ.

230 ಮೀಟರ್‌ ಉದ್ದದ ಈ ಸೇತುವೆಯನ್ನು 19ನೇ ಶತಮಾನದಲ್ಲಿ ನಿರ್ಮಾಣ ಮಾಡಲಾಗಿತ್ತು. ನವೀಕರಣ ಕಾರ್ಯ ಕೈಗೆತ್ತಿಕೊಂಡಿದ್ದರಿಂದಾಗಿ ಆರು ತಿಂಗಳು ನಾಗರಿಕರ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಐದು ದಿನಗಳ ಹಿಂದೆಯಷ್ಟೇ ಇದು ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಿತ್ತು. 

‘ಭಾನುವಾರ ರಜೆ ಇದ್ದ ಕಾರಣ ಭಾರಿ ಸಂಖ್ಯೆಯ ಪ್ರವಾಸಿಗರು ಸೇತುವೆ ಮೇಲೆ ಸೇರಿದ್ದರು. ಭಾರ ತಾಳಲಾರದೆ ಸಂಜೆ 6.30ರ ಸುಮಾರಿಗೆ ಅದು ಮುರಿದು ಬಿದ್ದಿದೆ. ಸೇತುವೆ ಮೇಲಿದ್ದವರ ಪೈಕಿ ಬಹುಪಾಲು ಮಂದಿ ನದಿಗೆ ಬಿದ್ದರೆ, ಕೆಲವರು ಹಗ್ಗ ಹಿಡಿದು ನೇತಾಡುತ್ತಿದ್ದರು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಸೇತುವೆ ಮೇಲೆ ಮಹಿಳೆಯರು ಮತ್ತು ಮಕ್ಕಳು ದೊಡ್ಡ ಸಂಖ್ಯೆಯಲ್ಲಿ ಇದ್ದರು’ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. 

ರಕ್ಷಣಾ ಕಾರ್ಯಕ್ಕಾಗಿ ರಾಜ್‌ಕೋಟ್‌ ಹಾಗೂ ಕಚ್‌ನಿಂದ ಎಸ್‌ಡಿಆರ್‌ಎಫ್‌ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಯನ್ನು ಕರೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

‘ಕಳೆದ ವಾರವಷ್ಟೇ ಸೇತುವೆಯನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗಿತ್ತು. ಈ ದುರಂತದಿಂದ ನಮಗೂ ಆಘಾತವಾಗಿದೆ. ಈ ದುರ್ಘಟನೆಯ ಹೊಣೆಯನ್ನು ಸರ್ಕಾರವೇ ಹೊರಲಿದೆ’ ಎಂದು ಗುಜರಾತ್‌ನ ಕಾರ್ಮಿಕ ಸಚಿವ ಬ್ರಿಜೇಶ್‌ ಮೆರ್ಜಾ ಹೇಳಿದ್ದಾರೆ.

ರಕ್ಷಣಾ ತಂಡಗಳ ನಿಯೋಜನೆ–ಸಿಎಂಗೆ ಮೋದಿ ಸೂಚನೆ : ‘ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಸೇತುವೆ ದುರಂತದಲ್ಲಿ ಸಿಲುಕಿರುವವರ ರಕ್ಷಣೆಗೆ ಹೆಚ್ಚಿನ ತಂಡಗಳನ್ನು ನಿಯೋಜಿಸುವಂತೆ ಸೂಚಿಸಿದ್ದಾರೆ’ ಎಂದು ಪ್ರಧಾನಿಯವರ ಕಾರ್ಯಾಲಯ ತಿಳಿಸಿದೆ.

‘ಪ್ರಧಾನಿಯವರು ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಹಾಗೂ ಘಟನೆಯಲ್ಲಿ ಗಾಯ ಗೊಂಡವರ ಚಿಕಿತ್ಸೆಗೆ ತಲಾ ₹50 ಸಾವಿರ ನೆರವು ಘೋಷಿಸಿದ್ದಾರೆ’ ಎಂದು ಪಿಎಂಒ ಟ್ವೀಟ್‌ ಮಾಡಿದೆ. ರಾಜ್ಯ ಸರ್ಕಾರವು ಮೃತರ ಕುಟುಂಬಗಳಿಗೆ ತಲಾ ₹4 ಲಕ್ಷ ಪರಿಹಾರ ಹಾಗೂ ಗಾಯಗೊಂಡವರಿಗೆ ತಲಾ ₹50 ಸಾವಿರ ನೆರವು ಪ್ರಕಟಿಸಿದೆ. 

‘ಗಾಂಧಿನಗರ ಹಾಗೂ ವಡೋದರ ದಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್‌) ಮೂರು ತಂಡಗಳನ್ನು ರಕ್ಷಣಾ ಕಾರ್ಯಕ್ಕಾಗಿ ಮೊರ್ಬಿಗೆ ಕಳಿಸಲಾಗಿದೆ. ಮತ್ತೊಂದು ತಂಡವು ರಾಜ್‌ಕೋಟ್‌ ಮಾರ್ಗವಾಗಿ ಘಟನಾ ಸ್ಥಳಕ್ಕೆ ತೆರಳಲಿದೆ’ ಎಂದು ಎನ್‌ಡಿಆರ್‌ಎಫ್‌ನ ಮಹಾ ನಿರ್ದೇಶಕ ಅತುಲ್‌ ಕರ್ವಾಲ್‌ ಹೇಳಿದ್ದಾರೆ.

ಕನಿಷ್ಠ 100ರಿಂದ 150 ಜನರು ಇದ್ದಿರಬಹುದು’ ಎಂದು ಮೊರ್ಬಿ ಜಿಲ್ಲಾ ವ್ಯಾಪ್ತಿಯ ಭಾವನಗರ ಐಜಿ ಅಶೋಕ್ ಯಾದವ್ ಹೇಳಿದ್ದಾರೆ.

‘ಈ ದುರಂತದಿಂದ ನಮಗೂ ಆಘಾತವಾಗಿದೆ. ಈ ದುರ್ಘಟನೆಯ ಹೊಣೆಯನ್ನು ಸರ್ಕಾರವೇ ಹೊರಲಿದೆ’ ಎಂದು ಗುಜರಾತ್‌ನ ಕಾರ್ಮಿಕ ಸಚಿವ ಬ್ರಿಜೇಶ್‌ ಮೆರ್ಜಾ ಹೇಳಿದ್ದಾರೆ.

ರಕ್ಷಣಾ ತಂಡಗಳ ನಿಯೋಜನೆ–ಸಿಎಂಗೆ ಮೋದಿ ಸೂಚನೆ: ‘ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಸೇತುವೆ ದುರಂತದಲ್ಲಿ ಸಿಲುಕಿರುವವರ ರಕ್ಷಣೆಗೆ ಹೆಚ್ಚಿನ ತಂಡಗಳನ್ನು ನಿಯೋಜಿಸುವಂತೆ ಸೂಚಿಸಿದ್ದಾರೆ’ ಎಂದು ಪ್ರಧಾನಿಯವರ ಕಾರ್ಯಾಲಯ ತಿಳಿಸಿದೆ.

‘ಪ್ರಧಾನಿಯವರು ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಹಾಗೂ ಘಟನೆಯಲ್ಲಿ ಗಾಯ ಗೊಂಡವರ ಚಿಕಿತ್ಸೆಗೆ ತಲಾ ₹50 ಸಾವಿರ ನೆರವು ಘೋಷಿಸಿದ್ದಾರೆ’ ಎಂದು ಪಿಎಂಒ ಟ್ವೀಟ್‌ ಮಾಡಿದೆ. ರಾಜ್ಯ ಸರ್ಕಾರವು ಮೃತರ ಕುಟುಂಬಗಳಿಗೆ ತಲಾ ₹4 ಲಕ್ಷ ಪರಿಹಾರ ಹಾಗೂ ಗಾಯಗೊಂಡವರಿಗೆ ತಲಾ ₹50 ಸಾವಿರ ನೆರವು ಪ್ರಕಟಿಸಿದೆ. 

‘ದುರಂತಕ್ಕೆ ಸರ್ಕಾರದ ನಿರ್ಲಕ್ಷ್ಯ ಕಾರಣ’

‘ಪಶ್ಚಿಮ ಗುಜರಾತ್‌ನ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಶತಮಾನದಷ್ಟು ಹಳೆಯ ತೂಗುಸೇತುವೆ ಕುಸಿತವಾಗಿರುವುದಕ್ಕೆ ಆಡಳಿತಾರೂಢ ಬಿಜೆಪಿ ಸರ್ಕಾರದ ನಿರ್ಲಕ್ಷ್ಯವೇ ಕಾರಣ’ ಎಂದು ಸಿಪಿಐ ರಾಜ್ಯಸಭಾ ಸದಸ್ಯ ಬಿನೋಯ್‌ ವಿಶ್ವಂ ಟೀಕಿಸಿದ್ದಾರೆ.

ಆರು ತಿಂಗಳ ಕಾಲ ಸೇತುವೆಯ ನವೀಕರಣ ಕಾರ್ಯ ಕೈಗೊಳ್ಳಲಾಗಿತ್ತು ಎಂದು ಹೇಳಲಾಗಿದೆ. ನಾಲ್ಕು ದಿನಗಳ ಹಿಂದೆಯಷ್ಟೇ ಪ್ರವಾಸಿಗರಿಗೆ ಮುಕ್ತವಾಗಿದ್ದ ಈ ಸೇತುವೆ ಮುರಿದು ಬಿದ್ದಿರುವುದಕ್ಕೆ ಕಳಪೆ ಕಾಮಗಾರಿ ಕಾರಣ. ಸರ್ಕಾರವು ಮೃತರ ಕುಟುಂಬಗಳಿಗೆ ನೀಡುವ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಬೇಕು. ಈ ಕುರಿತು ಸೂಕ್ತ ತನಿಖೆ ನಡೆಸಬೇಕು. ಈ ನಿರ್ಲಕ್ಷ್ಯದಲ್ಲಿ ರಾಜಕಾರಣಿಗಳ ಪಾತ್ರದ ಕುರಿತೂ ತನಿಖೆಯಾಗಬೇಕು’ ಎಂದು ಟ್ವೀಟ್‌ ಮೂಲಕ ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!