ಕಾರ್ಕಳ: ವಿದ್ಯುತ್ ಶಾಕ್ ತಗಲಿ ವ್ಯಕ್ತಿ ಸಾವು
ಕಾರ್ಕಳ, ನ.1: ಕುಕ್ಕುಂದೂರು ಗ್ರಾಮದ ಜೋಡುರಸ್ತೆ ಎಂಬಲ್ಲಿ ವ್ಯಕ್ತಿಯೊಬ್ಬರು ವಿದ್ಯುತ್ ಕಂಬದಲ್ಲಿ ನೇತಾಡುತ್ತಿದ್ದ ವಯರನ್ನು ಆಕಸ್ಮಿಕವಾಗಿ ಮುಟ್ಟಿ ಶಾಕ್ ಹೊಡೆದು ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ರಾಮಕೃಷ್ಣ ನಾಯ್ಕ (54) ಮೃತಪಟ್ಟವರು.
ಇವರು ಎಂದಿನಂತೆ ಇಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ಕುಕ್ಕುಂದೂರು ಗ್ರಾಮದ ಜೋಡುರಸ್ತೆ ಸಮೀಪ ರಸ್ತೆ ಬದಿ ಬಿದ್ದಿದ್ದ ಗುಜುರಿ ವಸ್ತುಗಳನ್ನು ಹೆಕ್ಕಲು ಹೋಗಿದ್ದರು. ಈ ವೇಳೆ ಅಸ್ವಸ್ಥಗೊಂಡು ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿಲು ಕರೆದುಕೊಂಡು ಹೋದಾಗ ಆಸ್ಪತ್ರೆಯಲ್ಲಿ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ರಾಮಕೃಷ್ಣ ನಾಯ್ಕ ಅವರು ಗುಜುರಿ ಹೆಕ್ಕುತ್ತಿದ್ದ ಜಾಗದಲ್ಲಿ ವಿದ್ಯುತ್ ಕಂಬದಲ್ಲಿ ವಿದ್ಯುತ್ ತಂತಿ ತುಂಡಾಗಿ ನೆಲಮಟ್ಟದವರೆಗೆ ನೇತಾಡುತ್ತಿದ್ದೂದು ಕಂಡು ಬಂದಿದ್ದು, ಅದರಂತೆ ಗುಜುರಿ ವಸ್ತುಗಳನ್ನು ಹೆಕ್ಕುತ್ತಿದ್ದ ವೇಳೆ ವಿದ್ಯುತ್ ಕಂಬದಲ್ಲಿ ನೇತಾಡುತ್ತಿದ್ದ ವಿದ್ಯುತ್ ವಯರನ್ನು ಆಕಸ್ಮಿಕವಾಗಿ ಮುಟ್ಟಿದ ಪರಿಣಾಮ ಅವರು ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿದ್ದಾರೆ ಎಂಬುದಾಗಿ ಮೃತರ ಮಗ ದಿನೇಶ ನಾಯ್ಕ ಅವರು ನೀಡಿದ ಮಾಹಿತಿಯಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.