ಉಡುಪಿ: ನ.5 ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ

ಉಡುಪಿ: ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ನ.5ರಂದು ಬೆಳಿಗ್ಗೆ 10 ಕ್ಕೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿದೆ.

ಉಡುಪಿ ಜಿಲ್ಲಾ ಜನಸಂಕಲ್ಪ ಸಮಾವೇಶವು‌ ನ.7 ರಂದು ಬೆಳಿಗ್ಗೆ 10.30ಕ್ಕೆ ಕಾಪು ಬಸ್ ನಿಲ್ದಾಣದ ಬಳಿ ಹಾಗೂ ಸಂಜೆ 4ಕ್ಕೆ ತ್ರಾಸಿ‌ ಮುಳ್ಳಿಕಟ್ಟೆ ರಾ.ಹೆ. ಬಳಿ ನಡೆಯಲಿದೆ. ಈ ಎರಡೂ ಮಹತ್ವಪೂರ್ಣ ಕಾರ್ಯಕ್ರಮಗಳ ಬಗ್ಗೆ ಪೂರ್ವಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಸಂಘಟಿತ ಪ್ರಯತ್ನದ ಮೂಲಕ ನಿರೀಕ್ಷಿತ ಯಶಸ್ಸನ್ನು ಸಾಧಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಜಿಲ್ಲಾ ಜನಸಂಕಲ್ಪ ಸಮಾವೇಶದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತ್ರಾಸಿಯಲ್ಲಿ ನಡೆಯುವ ಜನಸಂಕಲ್ಪ ಸಮಾವೇಶದ ಪೂರ್ವಭಾವಿಯಾಗಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೂ.1,318 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳ ಶಿಲಾನ್ಯಾಸ ಮತ್ತು ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಲಿದ್ದಾರೆ.

ಪ್ರತೀ ಶಕ್ತಿಕೇಂದ್ರ ಮಟ್ಟದಲ್ಲಿ ಸಮಾವೇಶದ ಪೂರ್ವಭಾವಿ ಸಭೆಗಳು ಪ್ರಗತಿಯಲ್ಲಿದ್ದು, ಉತ್ತಮ ಸ್ಪಂದನೆ ದೊರೆಯುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ಜನಸಂಕಲ್ಪ ಸಮಾವೇಶದಲ್ಲಿ ಪ್ರತೀ ಬೂತ್ ವ್ಯಾಪ್ತಿಯಿಂದ ಫಲಾನುಭವಿಗಳು, ಪಕ್ಷದ ಹಿತೈಷಿಗಳು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕುಯಿಲಾಡಿ ತಿಳಿಸಿದರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು ಹಾಗೂ ಪ್ರಕೋಷ್ಠಗಳ ಸಂಯೋಜಕರು ಮತ್ತು ಸಂಘಟನಾತ್ಮಕ ಪ್ರಕೋಷ್ಠಗಳ ಸಂಚಾಲಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!