ಕಾನ್‌ಸ್ಟೆಬಲ್ ನೇಮಕ: ಗರಿಷ್ಠ ವಯೋಮಿತಿ ಹೆಚ್ಚಳ, ಅರ್ಜಿ ಸಲ್ಲಿಕೆ ವಿಸ್ತರಣೆ

ಬೆಂಗಳೂರು: ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಗೆ ನಿಗದಿಪಡಿಸಲಾಗಿದ್ದ ಗರಿಷ್ಠ ವಯೋಮಿತಿಯನ್ನು ಎರಡು ವರ್ಷಗಳಿಗೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 5,075 ಕಾನ್‌ಸ್ಟೆಬಲ್ ಹುದ್ದೆಗಳ (ಸಿವಿಲ್–1,591 ಹಾಗೂ ಸಿಎಆರ್–ಡಿಎಆರ್–3,484) ಭರ್ತಿಗಾಗಿ ಇತ್ತೀಚೆಗೆ ಅಧಿಸೂಚನೆ ಹೊರಡಿಸಲಾಗಿತ್ತು.

ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳಿಗೆ 25 ವರ್ಷ, ಎಸ್‌.ಸಿ, ಎಸ್‌.ಟಿ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 27 ವರ್ಷಗಳು ಹಾಗೂ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿತ್ತು.

ಗರಿಷ್ಠ ವಯೋಮಿತಿ ಹೆಚ್ಚಳ ಮಾಡುವಂತೆ ಒತ್ತಾಯಿಸಿದ್ದ ಅಭ್ಯರ್ಥಿಗಳು, ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿರುವ ರಾಜ್ಯ ಸರ್ಕಾರ, ಇದೀಗ ಗರಿಷ್ಠ ವಯೋಮಿತಿಯನ್ನು ಎರಡು ವರ್ಷ ಹೆಚ್ಚಳ ಮಾಡಿದೆ.

ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ: ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆ ದಿನವಾಗಿತ್ತು. ಇದೀಗ ಅರ್ಜಿ ಸಲ್ಲಿಕೆ ದಿನಾಂಕವನ್ನು ನವೆಂಬರ್ 31ಕ್ಕೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಪರಿಸ್ಕೃತ ಗರಿಷ್ಠ ವಯೋಮಿತಿ ಸಾಮಾನ್ಯ ಅಭ್ಯರ್ಥಿಗಳಿಗೆ 27 ವರ್ಷಗಳು, ಎಸ್‌.ಸಿ/ಎಸ್‌.ಟಿ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 29 ವರ್ಷಗಳು, ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 32 ವರ್ಷಗಳು”

Leave a Reply

Your email address will not be published. Required fields are marked *

error: Content is protected !!