ಪ್ರವೀಣ್ ಹತ್ಯೆ ಪ್ರಕರಣ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ಸಹಿತ ಮೂವರು ವಶಕ್ಕೆ

ಮಂಗಳೂರು: ಬಿಜೆಪಿಯ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳ ತಂಡ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ಸಹಿತ ಮೂವರನ್ನು ಇಂದು ಮುಂಜಾನೆ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದೆ.
ಬೆಳ್ಳಾರೆಯಲ್ಲಿ ಬೆಳ್ಳಂಬೆಳಗ್ಗೆ ದಾಳಿ ಮಾಡಿದ ಅಧಿಕಾರಿಗಳ ತಂಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಬ್ರಾಹಿಂ ಶಾ, ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಹಾಗೂ ಇಕ್ಬಾಲ್ ಎಂಬವರನ್ನು ವಶಕ್ಕೆ ಪಡೆದಿದ್ದಾರೆ.