ಬಾಲಿವುಡ್ ನಲ್ಲಿ ಆಫರ್ ಬಂದಿದ್ದು ನಿಜ ಎಂದು ಒಪ್ಪಿಕೊಂಡ ರಿಷಬ್ ಶೆಟ್ಟಿ

ಬೆಂಗಳೂರು ನ.6: ಕಾಂತಾರ ಚಿತ್ರದ ಯಶಸ್ಸು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ಚಿತ್ರದ ಬಳಿಕ ನಟ-ನಿರ್ದೇಶಕ ರಿಷಭ್ ಶೆಟ್ಟಿ ಮತ್ತಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದ್ದಾರೆ.

ಇತ್ತೀಚೆಗೆ ತೆಲುಗಿನಲ್ಲಿ ಸಿನಿಮಾ ಮಾಡುವಂತೆ ಅಲ್ಲು ಅರ್ಜುನ್ ತಂದೆ ಕೇಳಿಕೊಂಡಿದ್ದರು. ಇದೀಗ ಬಾಲಿವುಡ್ ನಿಂದಲೂ ಅವಕಾಶ ಬಂದಿದೆ ಎಂಬ ಮಾತುಗಳು ಸಿನೆಮಾ ಅಂಗಳದಲ್ಲಿ ಕೇಳಿಬರುತ್ತಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ರಿಷಬ್ ಶೆಟ್ಟಿ ಅವರು, ‘ನನಗೆ ಬಾಲಿವುಡ್  ಮತ್ತು ತೆಲುಗು ಸಿನಿಮಾ ರಂಗದಿಂದ ಆಫರ್ ಬಂದಿದ್ದು ನಿಜ. ಆದರೆ, ಸದ್ಯಕ್ಕೆ ನಾನು ಎಲ್ಲಿಯೂ ಹೋಗುತ್ತಿಲ್ಲ. ಕನ್ನಡದಲ್ಲೇ ಮಾಡುವುದಕ್ಕೆ ತುಂಬಾ ಕೆಲಸಗಳಿವೆ. ಹಾಗಾಗಿ ಇಲ್ಲಿಯೇ ಇದ್ದುಕೊಂಡು ಸಿನಿಮಾ ಮಾಡುತ್ತೇನೆ. ಆ ಸಿನಿಮಾವನ್ನೇ ವಿವಿಧ ಸಿನಿಮಾ ರಂಗದ ಪ್ರೇಕ್ಷಕರು ನೋಡಲಿ ಎನ್ನುವುದು ನನ್ನಾಸೆ ಎಂದಿದ್ದಾರೆ. 

ಈ ವೇಳೆ ಹಿಂದಿ ಸಿನಿಮಾ ರಂಗದ ಬಗ್ಗೆಯೂ ಮಾತನಾಡಿರುವ ಅವರು, ತಾವು ಯಾವಾಗಲೂ ಅಮಿತಾಭ್ ಬಚ್ಚನ್ ಅವರನ್ನು ಕೊಂಡಾಡುವುದಾಗಿಯೂ ತಿಳಿಸಿದ್ದಾರೆ. ಈ ಹೊತ್ತಿನ ನಟರಾದ ಶಾಹಿದ್ ಕಪೂರ್ ಮತ್ತು ಈಗಾಗಲೇ ಸಿನಿಮಾ ರಂಗಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಿದ ಶಾರುಖ್ ಖಾನ್ ಕುರಿತಾಗಿಯೂ ಅವರು ಮಾತನಾಡಿದ್ದಾರೆ. ಎಲ್ಲಾ ಸಿನಿಮಾ ರಂಗದ ಬಗ್ಗೆಯೂ ತಮಗೆ ಅಭಿಮಾನವಿದ್ದು, ಕನ್ನಡದಲ್ಲೇ ಸಿನಿಮಾ ಮಾಡುವ ಮೂಲಕ ಇತರ ಚಿತ್ರರಂಗವನ್ನೂ ಗೌರವಿಸುವುದಾಗಿ ಅವರು ತಿಳಿಸಿದ್ದಾರೆ.

Leave a Reply

Your email address will not be published.

error: Content is protected !!