ಆದಿಉಡುಪಿಯ ಹೆಲಿಪ್ಯಾಡ್ ಗೆ ಬಂದಿಳಿದ ಸಿಎಂ ಬೊಮ್ಮಾಯಿ

ಉಡುಪಿ: ಕಾಪುವಿನಲ್ಲಿ ನಡೆಯಲಿರುವ ಬಿಜೆಪಿ ಜನಸಂಕಲ್ಪ ಸಮಾವೇಶ ಸಹಿತ ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಲಿಕಾಫ್ಟರ್ ಮೂಲಕ ಇಂದು ಬೆಳಿಗ್ಗೆ 10.50ಕ್ಕೆ ಆದಿ ಉಡುಪಿ ಹೆಲಿಪ್ಯಾಡ್‌ಗೆ ಬಂದಿಳಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸಿಎಂಗೆ ಸಾಥ್ ನೀಡಿದರು.

ಆ ಬಳಿಕ ಸಿಎಂ ಅವರು, ರಸ್ತೆ ಮೂಲಕ ಕಾಪುವಿನಲ್ಲಿ ನಡೆಯುವ ಜನ ಸಂಕಲ್ಪ ಕಾರ್ಯಕ್ರಮಕ್ಕೆ ತೆರಳಿದರು. ಮಧ್ಯಾಹ್ನ 1.50ಕ್ಕೆ ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ನಡೆಯಲಿರುವ ಕರಾವಳಿಯ ಹಿರಿಯ ಪತ್ರಿಕೋದ್ಯೋಗಿಗಳ ಜನ್ಮ ಶತಮಾನೋತ್ಸವೋತ್ತರ ಸಂಸ್ಮರಣೆ ಕಾರ್ಯಕ್ರಮ, ಮಧ್ಯಾಹ್ನ 3.45 ಕ್ಕೆ ಕುಂದಾಪುರ ತಾಲೂಕು ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಆಯೋಜಿಸಲಾದ ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

Leave a Reply

Your email address will not be published.

error: Content is protected !!