ಕ್ರೀಡೆಯಲ್ಲಿ ಉತ್ತಮ ಸಾಧನೆ ಶಿಕ್ಷಕಿ ಸುಜಾತ ಶೆಟ್ಟಿ ಮೈಸೂರು ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಉಡುಪಿ: ಬ್ರಹ್ಮಾವರದ ಆರೂರು ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ವಿಜ್ಞಾನ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಹಾಗೂ ಉಡುಪಿ ಜಿಲ್ಲಾ ಮಟ್ಟದ ವಸತಿ ಶಾಲೆ ಮತ್ತು ಕಾಲೇಜುಗಳು ಸಂಯುಕ್ತವಾಗಿ ನೌಕರರ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದ ವಿಭಾಗ ಮಟ್ಚದ ಕ್ರೀಡಾಕೂಟದಲ್ಲಿ 40 ವರ್ಷಕ್ಕಿಂತ ಕೆಳಗಿನ ವಯೋಮಾನದ ವಿಭಾಗದಲ್ಲಿ ಸುಜಾತ ಶೆಟ್ಟಿಯವರು ತ್ರೋಬಾಲ್ ಪಂದ್ಯಾಟದಲ್ಲಿ ಅತ್ಯುತ್ತಮವಾಗಿ ಆಡಿ ಪಂದ್ಯಶ್ರೇಷ್ಟ ಪ್ರಶಸ್ತಿ ಪಡೆದಿದ್ದಾರೆ.

ಜಿಲ್ಲೆಯ ಒಟ್ಟು 8 ಶಾಲೆಯ ಶಿಕ್ಷಕರು ಹಾಗೂ ಶಿಕ್ಷಕೇತರ ನೌಕರರು ಭಾಗವಹಿಸಿದ್ದ ಈ ಕ್ರೀಡಾಕೂಟದಲ್ಲಿ ಸುಜಾತ ಶೆಟ್ಟಿಯವರು 100 ಮೀ ಓಟದಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಇವರು ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ಶಾಲೆ, ಪಟ್ಲ, ಹಿರೆಬೆಟ್ಟು, ಉಡುಪಿಯ ಶಿಕ್ಷಕಿ. ಈ ಸಾಧನೆಯ ಮೂಲಕ ಮೈಸೂರು ವಿಭಾಗ ಮಟ್ಟದಲ್ಲಿ ನಡೆಯುವ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಸುಜಾತ ಶೆಟ್ಟಿಯವರ ಸಾಧನೆಯನ್ನು ಶಾಲಾ ಪ್ರಾಂಶುಪಾಲೆ ಪೂರ್ಣಿಮಾ ಅವರು ಮತ್ತು ಶಾಲಾ ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ.

Leave a Reply

Your email address will not be published.

error: Content is protected !!