ಉಡುಪಿ:ನ.14-20 ರವರೆಗೆ ಜಿಲ್ಲಾ ಹಾಗೂ ರಾಜ್ಯ ಮಟ್ಟದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ

ಉಡುಪಿ ನ.10 (ಉಡುಪಿ ಟೈಮ್ಸ್ ವರದಿ): ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ನವೆಂಬರ್ 14 ರಿಂದ 20 ರವರೆಗೆ ಉಡುಪಿ ಜಿಲ್ಲೆಯಾದ್ಯಂತ ಜಿಲ್ಲಾ ಹಾಗೂ ರಾಜ್ಯ ಮಟ್ಟದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರು ತಿಳಿಸಿದ್ದಾರೆ.

ಇಂದು ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಉಡುಪಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮಂಗಳೂರು, ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಮಂಗಳೂರು, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು, ದ.ಕ ಹಾಗೂ ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಮಂಗಳೂರು, ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ಉಡುಪಿ ಹಾಗೂ ಉಡುಪಿ ಜಿಲ್ಲೆಯ ಅರ್ಬನ್ ಕೋ-ಆಪರೇಟಿವ್ ಬ್ಯಾಂಕುಗಳು, ಸಹಕಾರ ಇಲಾಖೆ ಉಡುಪಿ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಸಮಸ್ತ ಸಹಕಾರ ಸಂಘಗಳ / ಸೌಹಾರ್ದ ಸಹಕಾರಿಗಳ ನೇತೃತ್ವದೊಂದಿಗೆ ನವೆಂಬರ್ 14 ರಿಂದ 20ರವರೆಗೆ ‘ಭಾರತ 75 ಸಹಕಾರ ಸಂಸ್ಥೆಗಳ ಬೆಳವಣಿಗೆ ಮತ್ತು ಮುಂದಿನ ಭವಿಷ್ಯ”  ಎಂಬ ಧ್ಯೇಯ ವಾಕ್ಯದೊಂದಿಗೆ 69ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ರಾಷ್ಟ್ರದಾದ್ಯಂತ ಆಚರಿಸಲಾಗುತ್ತದೆ. ಈ ಕಾರ್ಯಕ್ರಮದ ಸಲುವಾಗಿ ಉಡುಪಿ ಜಿಲ್ಲೆಯಾದ್ಯಂತ ನವಂಬರ್ 14 ರಿಂದ ನವಂಬರ್ 20ರವರೆಗೆ ಸಹಕಾರ ತತ್ವಗಳು ಮತ್ತು ಸಹಕಾರ ವಿಚಾರಗಳನ್ನು ಸಾರ್ವಜನಿಕರಿಗೆ ತಿಳಿಯಪಡಿಸಲು ಸಹಕಾರ ರಥವನ್ನು ಹಳ್ಳಿ-ಹಳ್ಳಿಗಳಿಗೆ ಕಳುಹಿಸಲಾಗುವುದು ಎಂದು ತಿಳಿಸಿದರು.

ನವಂಬರ್ 14 ರಂದು ಬೆಳಿಗ್ಗೆ ಉಡುಪಿ ಜಿಲ್ಲೆಯ 800ಕ್ಕೂ ಮೇಲ್ಪಟ್ಟ ಸಹಕಾರ ಸಂಸ್ಥೆಯವರು ಬೆಳಿಗ್ಗೆ 7.30ಕ್ಕೆ ಪ್ರತಿಯೊಂದು ಸಹಕಾರ ಸಂಸ್ಥೆಯವರು ಅವರವರ ಸಂಸ್ಥೆಗಳಲ್ಲಿ ಸಹಕಾರ ಧ್ವಜಾರೋಹಣ ಮಾಡಿ ಆಯಾ ಸಂಘದ ಅಧ್ಯಕ್ಷರು, ನಿರ್ದೇಶಕರು ಮತ್ತು ನೌಕರರು ಸೇರಿ ಸಹಕಾರ ಗೀತೆ ಮತ್ತು ನಾಡಗೀತೆಯನ್ನು ಹಾಡುವ ಮೂಲಕ 69ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಚಾಲನೆ ನೀಡಲಾಗುತ್ತದೆ. ಆನಂತರ ಸಮಸ್ತ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಮತ್ತು ನೌಕರರು ದ್ವಿ-ಚಕ್ರ ವಾಹನ ಮತ್ತು ನಾಲ್ಕು ಚಕ್ರ ವಾಹನಗಳಲ್ಲಿ ಸಹಕಾರ ಧ್ವಜವನ್ನು ಕಟ್ಟಿಕೊಂಡು ಶಿರೂರು-ಬೈಂದೂರು-ಕುಂದಾಪುರ-ಬ್ರಹ್ಮಾವರ-ಉಡುಪಿ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿಯ ಉದ್ಯಾವರ ತಲುಪಲಾಗುತ್ತದೆ.

ತದನಂತರ ವಾಹನಗಳ ಜಾಥದೊಂದಿಗೆ ಸಹಕಾರಿಗಳು ಶಿಸ್ತು ಬದ್ದರಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಳೂರು ತಲುಪಲಾಗುತ್ತದೆ. ಹಾಗೂ ಕಾರ್ಕಳ ತಾಲೂಕಿನ ಸಮಸ್ತ ಸಹಕಾರಿಗಳು ಬೆಳ್ಮಣ್ ಮಾರ್ಗವಾಗಿ ಉಚ್ಚಿಲದ ಸಭಾಂಗಣಕ್ಕೆ ತಮ್ಮ ದ್ವಿ-ಚಕ್ರ ಮತ್ತು ನಾಲ್ಕು ಚಕ್ರ ವಾಹನದೊಂದಿಗೆ ಮತ್ತು ಜಿಲ್ಲೆಯ ಸಮಸ್ತ ನವೋದಯ ಸ್ವ-ಸಹಾಯ ಸದಸ್ಯರು ಉಚ್ಚಿಲದ ಶ್ರೀಮತಿ ತುಂಬೆ ಕರ್ಕೇರ ಸಭಾಭವನದಲ್ಲಿ ಸೇರಲಿದ್ದಾರೆ. ಅಲ್ಲಿಂದ ಮೆರವಣಿಗೆ ಯಲ್ಲಿ ರಾಷ್ಟ್ರೀಯ ಹೆದ್ದಾರಿ ಮುಳೂರಿನಲ್ಲಿ ಬೆಳಿಗ್ಗೆ 10 ಗಂಟೆಗೆ ಉಡುಪಿಯಿಂದ ಹೊರಟ ಮೆರವಣಿಗೆಯೊಂದಿಗೆ ಸೇರಿಕೊಳ್ಳಲಾಗುತ್ತದೆ. ಬಳಿಕ ಅಲ್ಲಿಂದ ಹತ್ತಾರು ಸಹಕಾರಿ ಸ್ತಬ್ದ ಚಿತ್ರಗಳು ಮತ್ತು ಅವರೊಂದಿಗೆ ಸಮಸ್ತ ಸಹಕಾರಿ ಗಳು ವಾಹನ ಜಾಥ ಮತ್ತು ಮೆರವಣಿಗೆಯ ಮೂಲಕ ಸಮಸ್ತ ಸಹಕಾರಿ ಗಣ್ಯರನ್ನು, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರೊಂದಿಗೆ ಅಭಿನಂದಿಸಲ್ಪಡುವ ಸಹಕಾರ ರತ್ನ ಡಾ|ಎಂ.ಎನ್.ರಾಜೇಂದ್ರ ಕುಮಾರ್, ಇವರೆಲ್ಲರನ್ನು ಮೆರವಣಿಗೆಯಲ್ಲಿ ಉಚ್ಚಿಲದ ಮಹಾಲಕ್ಷ್ಮೀ ದೇವಸ್ಥಾನದ ಸಭಾಭವನಕ್ಕೆ ಅದ್ಧೂರಿ ಮೆರವಣಿಗೆಯೊಂದಿಗೆ ಕರೆತರಲಾಗುವುದು ಎಂದು ಹೇಳಿದರು.

ನ.14 ರಂದು: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿರುವ ಸಹಕಾರ ರತ್ನ ಡಾ| ಎಂ.ಎನ್.ರಾಜೇಂದ್ರಕುಮಾರ್ ರವರ ಅಭಿನಂದನಾ ಕಾರ್ಯಕ್ರಮ ಮತ್ತು ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭ ಹಾಗೂ “ಸಹಕಾರ ಸಂಸ್ಥೆಗಳಲ್ಲಿ ವ್ಯಾಪಾರ ಸರಳೀಕರಣ, ‘ರಫ್ತು ವೃದ್ಧಿಗಾಗಿ ಜೆಮ್-ಪೋರ್ಟಲ್ ಬಳಕೆ” ವಿಷಯದ ಕುರಿತ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಬೆಂಗಳೂರು ಇದರ ಅಧ್ಯಕ್ಷ ಡಾ. ರಾಜೇಂದ್ರ ಕುಮಾರ್ ಅವರು ಉದ್ಘಾಟಿಸಲಿದ್ದಾರೆ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಆಶಿರ್ವಚನ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೃಷಿ ಮತ್ತು ರೈತರ ಕಲ್ಯಾಣ ಇಲಾಖಾ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಾರಿಗೆ ಇಲಾಖೆ ರಾಜ್ಯ ಸಚಿವ ಎಸ್.ಅಂಗಾರ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸುನಿಲ್ ಕುಮಾರ್, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಇದರ ಡಾ.ಜಿ.ಶಂಕರ್, ಉಡುಪಿ ಶಾಸಕ ಕೆ.ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಮೆಂಡನ್, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರು ಮಂಜುನಾಥ ಭಂಡಾರಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಬೆಂಗಳೂರು ಇದರ ನಿರ್ದೇಶಕ ಡಾ. ದೇವಿಪ್ರಸಾದ್ ಶೆಟ್ಟಿ, ದ.ಕ ಹಾಗೂ ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್‍ಪಾಲ್ ಸುವರ್ಣ, ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ  ಅಧ್ಯಕ್ಷ ಜಯ ಸಿ.ಕೋಟ್ಯಾನ್ ಬೆಳ್ಳಂಪಳ್ಳಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ಇದರ ನಿರ್ದೇಶಕ ಮಂಜುನಾಥ ಎಸ್.ಕೆ, ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇದರ ಅಧ್ಯಕ್ಷರಾದ ಕೆ.ಪಿ ಸುಚರಿತ ಶೆಟ್ಟಿ, ಕಾಪು ದಿವಾಕರ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ನ.15 ರಂದು: ಸಹಕಾರ ಸಪ್ತಾಹದ ಎರಡನೇ ದಿನವಾದ ನ.15 ರಂದು  ಪಡುಬಿದ್ರಿ ವ್ಯವಸಾಯ ಸೇವಾ ಸಹಕಾರ ಸಂಘದ ಸಹಯೋಗದೊಂದಿಗೆ ಸಹಕಾರ ಸಂಗಮದ ವೈಲಕ್ಷ್ಮಣ ಸಭಾಂಗಣದಲ್ಲಿ ಬೆಳಿಗ್ಗೆ 11 ಗೆ ನಡೆಯುವ “ಸಹಕಾರ ಮಾರುಕಟ್ಟೆ, ಗ್ರಾಹಕ, ರೂಪಾಂತರ ಮತ್ತು ಮೌಲ್ಯವರ್ಧನೆ” ದಿನದ ಕಾರ್ಯಕ್ರಮವನ್ನು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ಇದರ ನಿರ್ದೇಶಕ ಬಿ.ಜಯಕರ ಶೆಟ್ಟಿ ಇಂದ್ರಾಳಿ ಅವರು ಉದ್ಘಾಟಿಸಲಿದ್ದಾರೆ. ಪಡುಬಿದ್ರಿ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ವೈ ಸುಧೀರ್ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿಯ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ನ ಅಧ್ಯಕ್ಷ ಯಶ್‍ಪಾಲ್ ಸುವರ್ಣ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಲಕ್ಷ್ಮೀ ನಾರಾಯಣ ಜಿ.ಎನ್. ಕುಂದಾಪುರ ತಾಲೂಕು ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಲಾವಣ್ಯ ಕೆ.ಆರ್. ಅವರು ಹಾಗೂ  ದಿಕ್ಸೂಚಿ ಭಾಷಣಗಾರರಾಗಿ ಜಾನಪದ ವಿದ್ವಾಂಸರಾದ ನಿವೃತ್ತ ಪ್ರೋಫೆಸರ್ ಡಾ. ಗಣನಾಥ ಎಕ್ಕಾರು ಅವರು ಉಪಸ್ಥಿತರಿರಲಿದ್ದಾರೆ ಎಂದರು.

ನ.16 ರಂದು: ಮೂರನೇ ದಿನದ ಕಾರ್ಯಕ್ರಮದ ಭಾಗವಾಗಿ ನ.16 ರಂದು ಬೆಳಿಗ್ಗೆ 10.30ಕ್ಕೆ ಕಾರ್ಕಳ ತಾಲೂಕಿನ ಪಾಥಮಿಕ ಸಹಕಾರಿ ಕೃಷಿ ಮತ್ತು ಗಾಮೀಣಾಭಿವೃದ್ಧಿ ಬ್ಯಾಂಕ್, ಕಾರ್ಕಳ ಕೃಷಿಯುತ್ಪನ್ನ ಮಾರಾಟ ಸಹಕಾರ ಸಂಘ ಕಾರ್ಕಳ, ಕಾರ್ಕಳ ತಾಲೂಕು ಲ್ಯಾಂಪ್ಸ್ ಸಹಕಾರ ಸಂಘ ಇದರ ಸಹಯೋಗದೊಂದಿಗೆ ಲ್ಯಾಂಪ್ಸ್ ಸಹಕಾರ ಸಂಘದ ಸಭಾಂಗಣದಲ್ಲಿ ಆಯೋಜಿಸಿರುವ “ಸಹಕಾರ ಶಿಕ್ಷಣ, ವೃತ್ತಿಪರ ನಿರ್ವಹಣೆಯನ್ನು ಮುಖ್ಯವಾಹಿನಿಗೆ ತರಲು ಪುನರ್ ನಿರ್ಮಿಸುವುದು” ಎಂಬ ವಿಷಯದ ದಿನವನ್ನು ಕಾರ್ಕಳ ಕೃಷಿಯುತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ವಾದಿರಾಜ ಶೆಟ್ಟಿ ಅವರು ಉದ್ಘಾಟಿಸಲಿದ್ದಾರೆ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷ ಆಶೋಕ್ ಕುಮಾರ್ ಬಲ್ಲಾಳ್, ಕಾರ್ಕಳ ತಾಲೂಕಿನ ಲ್ಯಾಂಪ್ಸ್ ಸಹಕಾರ ಸಂಘದ ಅಧ್ಯಕ್ಷ ರಾಘವ ನಾಯ್ಕ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಲಕ್ಷ್ಮೀನಾರಾಯಣ ಜೆ.ಎನ್, ಕುಂದಾಪುರ ತಾಲೂಕು ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಲಾವಣ್ಯ ಕೆ.ಆರ್. ಹಾಗೂ ದಿಕ್ಸೂಚಿ ಭಾಷಣಗಾರರಾಗಿ ಮೂಡುಬಿದ್ರೆಯ ದವಳಾ ಕಾಲೇಜಿನ ಉಪನ್ಯಾಸಕ ಸಂತೋಷ್ ಶೆಟ್ಟಿ ಅವರು ಭಾಗವಹಿಸಲಿದ್ದಾರೆ.

ನ.17 ರಂದು: ನಾಲ್ಕನೇ ದಿನದ ಕಾರ್ಯಕ್ರಮವಾದ ನ.17 ರಂದು ಬೆಳಿಗ್ಗೆ 10.30ಕ್ಕೆ ಅಲೆವೂರು ಹಾಲು ಉತ್ಪಾದಕರ ಸಹಕಾರ ಸಂಘದ ಸಹಯೋಗದೊಂದಿಗೆ ಅಲೆವೂರಿನ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿರುವ
 “ಆವಿಷ್ಕಾರ ಪೋಷಣೆ, ಸ್ಟಾರ್ಟ್ ಅಪ್‍ಗಳಿಗೆ ಉತ್ತೇಜನ ಮತ್ತು ತಂತ್ರಜ್ಞಾನದ ಉನ್ನತೀಕರಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ” ಎಂಬ ವಿಷಯದ ಕುರಿತಾ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇದರ ಅಧ್ಯಕ್ಷರಾದ ಕೆ.ಪಿ.ಸುಚರಿತ ಶೆಟ್ಟಿ ಅವರು ಉದ್ಘಾಟಿಸಲಿದ್ದಾರೆ. ಅಲೆವೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಹರೀಶ್ ಕಿಣಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ವೇಳೆ ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಬೆಂಗಳೂರು ಇದರ ನಿರ್ದೇಶಕ ಡಾ. ದೇವಿಪ್ರಸಾದ್ ಶೆಟ್ಟಿ, ಕರ್ನಾಟಕ ರಾಜ್ಯ ಹಾಲು ಮಹಾಮಂಡಳಿ(ಕೆ.ಎಂ.ಎಫ್) ಬೆಂಗಳೂರು ಇದರ ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ನಿರ್ದೇಶಕ ಅಶೋಕ್ ಕುಮಾರ್ ಶೆಟ್ಟಿ ಬೆಳ್ಳಂಪಳ್ಳಿ, ಮಂಗಳೂರಿನ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕ ರಾಜೇಶ್ ರಾವ್ ಪಾಂಗಾಳ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇದರ ನಿರ್ದೇಶಕ ಕೆ. ರವಿರಾಜ್ ಹೆಗ್ಡೆ, ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪ ಅಂಚನ್,  ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘ ಕುಕ್ಕಿಕಟ್ಟೆ ಇದರ ಅಧ್ಯಕ್ಷ  ಹರೀಶ್ ಶೇರಿಗಾರ್,  ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಲಕ್ಷ್ಮೀನಾರಾಯಣ ಜೆ.ಎನ್, ಕುಂದಾಪುರ ತಾಲೂಕು ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಲಾವಣ್ಯ ಕೆ.ಆರ್. ಹಾಗೂ ದಿಕ್ಸೂಚಿ ಭಾಷಣಕಾರರಾಗಿ ಜಾನಪದ ವಿದ್ವಾಂಸರಾದ ನಿವೃತ್ತ ಪ್ರೋಫೆಸರ್ ಡಾ. ಗಣನಾಥ ಎಕ್ಕಾರು ಅವರು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.

ನ.18 ರಂದು: ಐದನೇ ದಿನದ  ರಾಜ್ಯ ಮಟ್ಟದ ಸಹಕಾರ ಸಪ್ತಾಹದ ಕಾರ್ಯಕ್ರಮದಲ್ಲಿ ನ.18 ರಂದು ಬೆಳಿಗ್ಗೆ 10 ಗಂಟೆಗೆ “ಉದ್ಯಮಶೀಲತೆ ಅಭಿವೃದ್ಧಿ, ಸಾರ್ವಜನಿಕ- ಖಾಸಗಿ -ಸಹಕಾರಿ ಸಹಭಾಗಿತ್ವವನ್ನು ಬಲಗೊಳಿಸುವುದು” ಎಂಬ ವಿಷಯದ ಕಾರ್ಯಕ್ರಮವನ್ನು ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, ಇಲ್ಲಿನ ಸಹಕಾರ ಸಚಿವರು, ಜಿಲ್ಲೆಯ ಶಾಸಕರು, ಗಣ್ಯ ಸಹಕಾರಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದ ಅವರು,  6 ನೇ ದಿನದ ಕಾರ್ಯಕ್ರಮದ ಭಾಗವಾಗಿ ನ.19 ರಂದು ಉಡುಪಿ ತಾಲೂಕಿನ ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘದ ಸಹಯೋಗದೊಂದಿಗೆ ಅಜ್ಜರಕಾಡಿನ ಪುರಭವನ (ಟೌನ್ ಹಾಲ್)ದ ಮಿನಿ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ಆಯೋಜಿಸಲಾದ “ಯುವಜನ, ಮಹಿಳಾ ಮತ್ತು ಅಬಲ ವರ್ಗಕ್ಕಾಗಿ ಸಹಕಾರ ಸಂಸ್ಥೆಗಳು” ಎಂಬ ವಿಚಾರದ ಕುರಿತಾ ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಅವರು ಉದ್ಘಾಟಿಸಲಿದ್ದಾರೆ. ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘದ ಅಧ್ಯಕ್ಷ ಬಿ. ಆಶೋಕ್ ಕುಮಾರ್ ಶೆಟ್ಟಿ, ಮೈರ್ಮಾಡಿ, ಕರ್ಜೆ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ, ಇಂದ್ರಾಳಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ  ಬೆಂಗಳೂರು ಇದರ ನಿರ್ದೇಶಕ ಡಾ. ದೇವಿಪ್ರಸಾದ್ ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಲಕ್ಷ್ಮೀನಾರಾಯಣ ಜೆ.ಎನ್, ಉಡುಪಿ ನಗರ ಸಭೆ  ಪೌರಾಯುಕ್ತ ಡಾ| ಉದಯ ಶೆಟ್ಟಿ, ದಿಕ್ಸೂಚಿ ಭಾಷಣಕಾರರಾಗಿ ಅಜ್ಜರಕಾಡಿನ ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ  ಕನ್ನಡ ವಿಭಾಗದ ಮುಖ್ಯಸ್ಥ ಡಾ. ನಿಕೇತನ ಅವರು ಉಪಸ್ಥಿತರಿರಲಿದ್ದಾರೆ ಎಂದು ಹೇಳಿದರು.

ನ.20 ರಂದು: 7 ನೇ ದಿನದ ಸಪ್ತಾಹದ ಸಮಾರೋಪ ಸಮಾರಂಭದ ಭಾಗವಾಗಿ ನ.20 ರಂದು ಮಧ್ಯಾಹ್ನ 3 ಗಂಟೆಗೆ  ಖಂಬದಕೋಣೆ ರೈತರ ಸಹಕಾರ ಸಂಘದ ಸಹಯೋಗದೊಂದಿಗೆ ಉಪ್ಪುಂದದ ಖಂಬದ ಕೋಣೆಯ ಕರ್ನಾಟಕ ಖಾರ್ವಿ ಹರಿಕಾಂತ ಸಭಾಂಗಣಲ್ಲಿ ನಡೆಯುವ “ಆರ್ಥಿಕ ಸೇರ್ಪಡೆ, ಪಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಸ್ಥೆಗಳ ಡಿಜಿಟಲೀಕರಣ ಮತ್ತು ಸಹಕಾರ ಸಂಸ್ಥೆಗಳ ದತ್ತಾಂಶವನ್ನು ಬಲಪಡಿಸುವುದು” ಎಂಬ ವಿಷಯದ ಕುರಿತ ಕಾರ್ಯಕ್ರಮವನ್ನು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಅವರು ಉದ್ಘಾಟಿಸಲಿದ್ದಾರೆ. ಉಪ್ಪುಂದದ ಖಂಬದಕೋಣೆ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ನಡೆಯುವ ಗೌರವ ಶಿಕ್ಷಕರಿಗೆ ಗೌರವಧನ ವಿತರಣೆಯನ್ನು ಬೈಂದೂರಿನ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ನೆರವೇರಿಸಲಿದ್ದಾರೆ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಇವರು ಸಂಘದ ಸವಲತ್ತು ವಿತರಣೆ ಮಾಡಲಿದ್ದಾರೆ. ಈ ವೇಳೆ ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಲಕ್ಷ್ಮೀನಾರಾಯಣ ಜೆ.ಎನ್, ಕುಂದಾಪುರ ತಾಲೂಕು ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಲಾವಣ್ಯ ಕೆ.ಆರ್. , ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕದ ಎಸ್.ರಾಜು ಪೂಜಾರಿ, ಮಹೇಶ್ ಹೆಗ್ಡೆ, ಖಂಬದಕೋಣೆ ಗ್ರಾಮ ಪಂಚಾಯತ್ ಅಧ್ಯಕ್ಷ ಸುಕೇಶ್ ಹೆಗ್ಡೆ ಹಾಗೂ ದಿಕ್ಸೂಚಿ ಭಾಷಣಗಾರಾಗಿ ಮೂದಬಿದ್ರೆಯ ದವಳಾ ಕಾಲೇಜಿನ ಉಪನ್ಯಾಸಕ ಸಂತೋಷ್ ಶೆಟ್ಟಿ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಬೆಂಗಳೂರು ಇದರ ನಿರ್ದೇಶಕ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಉಡುಪಿಯ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ನ ಅಧ್ಯಕ್ಷ ಯಶ್‍ಪಾಲ್ ಸುವರ್ಣ, ಅಲೆವೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಹರೀಶ್ ಕಿಣಿ ಅಲೆವೂರು , ಶ್ರೀಧರ್ ಪಿಎಸ್,ರಜೇಶ್ ರಾವ್ ಇನ್ನಂಜೆ, ಅಶೋಕ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published.

error: Content is protected !!