ನ.13 ವಿಶ್ವ ಮಧುಮೇಹ ದಿನಾಚರಣೆ: ಉಚಿತ ಮಧುಮೇಹ ಕಣ್ಣಿನ ತಪಾಸಣಾ ಶಿಬಿರ

ಉಡುಪಿ ನ.11(ಉಡುಪಿ ಟೈಮ್ಸ್ ವರದಿ): ನಗರದ ಹೆಸರಾಂತ ಕಣ್ಣಿನ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಪ್ರಸಾದ್ ನೇತ್ರಾಲಯದಲ್ಲಿ ನ.13 ರಂದು ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತ ಉಚಿತ ಮಧುಮೇಹ ಕಣ್ಣಿನ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

ಈ ಬಗ್ಗೆ ಪ್ರಕಟಣೆ ಮೂಲಕ ಮಾಹಿತಿ ನೀಡಲಾಗಿದ್ದು,
ನ.13 ರಂದು ಬೆಳಿಗ್ಗೆ 9 ಕ್ಕೆ ಪ್ರಾರಂಭವಾಗುವ ಶಿಬಿರವು ಮಧ್ಯಾಹ್ನ 12.30 ರವರೆಗೆ ನಡೆಯಲಿದೆ. ಈ ಶಿಬಿರದಲ್ಲಿ ಉಚಿತ ಮಧುಮೇಹ ಕಣ್ಣಿನ ತಪಾಸಣೆ ಇರುತ್ತದೆ. ಹೆಚ್ಚಿನ ತಪಾಸಣೆ ಅಗತ್ಯ ಕಂಡುಬರುವ ಶಿಬಿರಾರ್ಥಿಗಳಿಗೆ ಶೇ.50 ರಷ್ಟು ರಿಯಾಯಿತಿ ದರದಲ್ಲಿ ತಪಾಸಣೆ ನಡೆಸಲಾಗುವುದು ಮತ್ತು ಚಿಕಿತ್ಸೆಯನ್ನು ರಿಯಾಯಿತಿ ದರದಲ್ಲಿ ನಡೆಸಲಾಗುವುದು ಎಂದು ತಿಳಿಸಲಾಗಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಸಾರ್ವಜನಿಕರು ಅಪಾಯಿಂಟ್‍ಮೆಂಟ್‍ಗಾಗಿ 0820-2593323, 7204124403 ಸಂಖ್ಯೆಯನ್ನು ಸಂಪರ್ಕಿಸುಂತೆ ಆಸ್ಪತ್ರೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published.

error: Content is protected !!