ನಂದಿನಿ ಹಾಲಿನ ದರ ಹೆಚ್ಚಳಕ್ಕೆ ತಾತ್ಕಾಲಿಕ ತಡೆ – ಸಿಎಂ ಬೊಮ್ಮಾಯಿ

ಬೆಂಗಳೂರು: ನಂದಿನಿ ಬ್ರ್ಯಾಂಡ್‌ನ ಎಲ್ಲ ಮಾದರಿಯ ಹಾಲು ಮತ್ತು ಮೊಸರಿನ ದರವನ್ನು ನ.15 ರಿಂದ ಪ್ರತಿ ಲೀಟರ್‌ಗೆ ರೂ.3ರಷ್ಟು ಹೆಚ್ಚಳ ಮಾಡಲು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ಕೈಗೊಂಡಿದ್ದ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆಯಂತೆ ತಡೆ ಹಿಡಿಯಲಾಗಿದೆ.

ಹಾಲಿನ ದರ ಹೆಚ್ಚಿಸುವ ಪ್ರಸ್ತಾವಕ್ಕೆ ಕೆಎಂಎಫ್‌ ಆಡಳಿತ ಮಂಡಳಿ ಸಭೆಯಲ್ಲಿ ಒಪ್ಪಿಗೆ ನೀಡಲಾಗಿತ್ತು. ಮಂಗಳವಾರದಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ಮಂಡಳಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸೋಮವಾರ ಪ್ರಕಟಿಸಿದ್ದರು. ಹೆಚ್ಚಳದ ಪೂರ್ಣ ಮೊತ್ತವನ್ನು ರೈತರಿಗೆ ವರ್ಗಾಯಿಸುವ ಘೋಷಣೆಯನ್ನೂ ಮಾಡಿದ್ದರು.

ಕಲಬುರಗಿ ಜಿಲ್ಲಾ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ, ಹಾಲಿನ ದರ ಏರಿಕೆ ಕುರಿತು ಇದೇ 20ರಂದು ಕೆಎಂಎಫ್‌ ಅಧ್ಯಕ್ಷರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಸೋಮವಾರ ಸಂಜೆ ಮಾಧ್ಯಮಗಳಿಗೆ ಹೇಳಿಕೆ ನೀಡಿದರು. ಆ ಬಳಿಕ ಮಂಡಳಿ ಅಧ್ಯಕ್ಷರ ಜತೆಗೂ ದೂರವಾಣಿ ಮೂಲಕ ಚರ್ಚೆ ನಡೆಸಿದರು. ಮುಖ್ಯಮಂತ್ರಿಯವರ ಮಧ್ಯ ಪ್ರವೇಶದ ನಂತರ ದರ ಹೆಚ್ಚಳದ ತೀರ್ಮಾನವನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ. 

Leave a Reply

Your email address will not be published.

error: Content is protected !!