ವಿಧಾನಸಭೆ ಚುನಾವಣೆ : ಅರ್ಜಿ ಸಲ್ಲಿಕೆಯ ಗಡುವು ವಿಸ್ತರಿಸಿದ ಕಾಂಗ್ರೆಸ್

ಬೆಂಗಳೂರು, ನ.15: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆಗೆ ನಿಗದಿ ಮಾಡಲಾಗಿದ್ದ ಗಡುವನ್ನು ನ.21ರವರೆಗೆ ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಕೆಗೆ ಇಂದು ಕೊನೆ ದಿನವಾಗಿತ್ತು. ಆದರೆ ಈ ಅವಧಿ ವಿಸ್ತರಣೆ ಮಾಡುವಂತೆ ರಾಜ್ಯದ ಮೂಲೆ, ಮೂಲೆಗಳಿಂದ ಪಕ್ಷದವರು ಹಾಗೂ ಅನ್ಯ ಪಕ್ಷಗಳಿಂದ ಕಾಂಗ್ರೆಸ್‌ಗೆ ಬರಲು ಇಚ್ಚಿಸಿರುವ ಟಿಕೆಟ್ ಆಕಾಂಕ್ಷಿಗಳಿಂದ ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!