ಉಡುಪಿ ಅಕ್ರಮ ಮರಳುಗಾರಿಕೆ: ಜಿಲ್ಲಾಧಿಕಾರಿಗಳಿಗೆ ಜಿಲ್ಲಾ ಕಾಂಗ್ರೆಸ್ ಮನವಿ
ಉಡುಪಿ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರ ನೇತೃತ್ವದಲ್ಲಿ ಬುಧವಾರ ಅಕ್ರಮ ಮರಳುಗಾರಿಕೆ ಬಗ್ಗೆ ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕರಾದ ಯು. ಆರ್. ಸಭಾಪತಿ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್, ಕಾಂಗ್ರೆಸ್ ಮುಖಂಡರಾದ ವೆರೋನಿಕಾ ಕರ್ನೇಲಿಯೋ, ದಿನೇಶ್ ಪುತ್ರನ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಬಿ. ನರಸಿಂಹ ಮೂರ್ತಿ, ಹರೀಶ್ ಕಿಣಿ, ಭಾಸ್ಕರ್ ರಾವ್ ಕಿದಿಯೂರು, ಮುರಲಿ ಶೆಟ್ಟಿ, ಮಂಜುನಾಥ ಪೂಜಾರಿ, ರೊಶನಿ ಒಲಿವರ್, ಹರೀಶ್ ಶೆಟ್ಟಿ ಪಾಂಗಳ, ಹಬೀಬ್ ಆಲಿ, ಕೀರ್ತಿ ಶೆಟ್ಟಿ, ಉದ್ಯಾವರ ನಾಗೇಶ್ ಕುಮಾರ್, ಕುಶಲ್ ಶೆಟ್ಟಿ, ಡಾ. ಸುನೀತಾ ಶೆಟ್ಟಿ, ಡೆರಿಕ್, ರಮೇಶ್ ಕಾಂಚನ್, ಸೂರ್ಯ ಮೊದಲಾದವರು ಉಪಸ್ಥಿತರಿದ್ದರು.