ನ.19 ಅಖಿಲ ಭಾರತ ಬ್ಯಾಂಕ್ ಮುಷ್ಕರ 

ಉಡುಪಿ : ಬ್ಯಾಂಕ್ ನೌಕರರು  ಹಾಗೂ ಸಂಘಟನೆಗಳ ಮೇಲೆ ವಿವಿಧ ಬ್ಯಾಂಕುಗಳ ಆಡಳಿತ ಮಂಡಳಿಗಳು ಅವ್ಯಾಹತವಾಗಿ ನಡೆಸುತ್ತಿರುವ ಆಕ್ರಮಣಕಾರಿ ವರ್ತನೆ, ದ್ವಿಪಕ್ಷೀಯ ಒಪ್ಪಂದ ಹಾಗೂ ಕಾರ್ಮಿಕ ಕಾಯಿದೆಗಳ ಉಲ್ಲಂಘನೆ, ಬ್ಯಾಂಕಿಂಗ್ ಕೆಲಸವನ್ನು ಹೊರಗುತ್ತಿಗೆಗೆ ನೀಡುವುದನ್ನು ಖಂಡಿಸಿ ಹಾಗೂ ಬ್ಯಾಂಕುಗಳಲ್ಲಿರುವ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಲು ಒತ್ತಾಯಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು ನ.19 ಶನಿವಾರ ಒಂದು ದಿನದ ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆಂದು ಉಡುಪಿ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ನಾಗೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಮುಷ್ಕರದ ಅಂಗವಾಗಿ ಅಂದು ಬೆಳಿಗ್ಗೆ 10 ಗಂಟೆಗೆ ಉಡುಪಿಯ ಕೆನರಾ ಬ್ಯಾಂಕ್ ಕೋರ್ಟ್ ರೋಡ್ ಶಾಖೆಯ ಮುಂಭಾಗದಲ್ಲಿ ಉಡುಪಿ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ಮತ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಕೆಲಸ ಮಾಡುವ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಎಲ್ಲಾ ಸದಸ್ಯರು, ನಿವೃತ್ತ ಬ್ಯಾಂಕ್ ಉದ್ಯೋಗಿಗಳು ಈ ಮುಷ್ಕರದಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದ್ದಾರೆ.

Leave a Reply

Your email address will not be published.

error: Content is protected !!