ಉಡುಪಿ: ಮೀನುಗಾರರ ಮಕ್ಕಳಿಗೆ ಶಿಷ್ಯವೇತನ- ಅರ್ಜಿ ಆಹ್ವಾನ

ಉಡುಪಿ, ನ.18: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ
ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯನ್ನು ಮಾನ್ಯ ಮುಖ್ಯ ಮಂತ್ರಿಗಳು ಘೋಷಿಸಿದ್ದು, ಈ ಯೋಜನೆಯ ಸೌಲಭ್ಯ ಪಡೆಯಲು ಮೀನುಗಾರರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

8, 9, 10, ಪಿ.ಯು.ಸಿ., ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಜಿಲ್ಲೆಯ ಮೀನುಗಾರರಸಹಕಾರಿ ಸಂಘದ ಸದಸ್ಯರು ಹಾಗೂ ಮೀನು ಕೃಷಿಕರ ಮಕ್ಕಳು ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಸಂಬOಧಪಟ್ಟ ಮೀನುಗಾರರ ಸಹಕಾರಿ ಸಂಘಗಳಿOದ ಮಾಹಿತಿ ಪಡೆದು, ಪ್ರೂಟ್ಸ್ ಐಡಿ ಯನ್ನು ನವೆಂಬರ್ 28 ರ ಒಳಗೆ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!