ಗಂಗಾ ಕಲ್ಯಾಣ ಫಲಾನುಭವಿಗಳಿಗೆ 17000 ಕೊಳವೆ ಬಾವಿ ನಿರ್ಮಾಣಕ್ಕೆ ನೇರ ಹಣ ಪಾವತಿ- ಸಚಿವ ಕೋಟ

ಉಡುಪಿ, ನ.18: ಸಮಾಜ ಕಲ್ಯಾಣ ಇಲಾಖೆ, ಅಂಬೇಡ್ಕರ್ ಅಭಿವೃಧ್ದಿ ನಿಗಮ ಸೇರಿದಂತೆ 7 ವಿವಿಧ ನಿಗಮಗಳ ಮೂಲಕ ಗಂಗಾ ಕಲ್ಯಾಣ ಯೋಜನೆಯಡಿ ಒಟ್ಟು 17000 ಕೊಳವೆ ಬಾವಿಗಳನ್ನು ಕೊರೆಯಲು ಹಣವನ್ನು ರೈತರ
ಖಾತೆಗೆ ನೇರವಾಗಿ ವರ್ಗಾಯಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.

ಅವರು ಅನಾರೋಗ್ಯದ ಕಾರಣ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು,
ಅಲ್ಲಿದಂದಲೇ ಇಂದು ಸಮಾಜ ಕಲ್ಯಾಣ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಕುರಿತಂತೆ ವೀಡಿಯೋ ಕಾನ್ಫ್ರೆನ್ಸ್ ಮೂಲಕ ನಡೆಸಿದ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ.ಜಾತಿ ಮತು ಪಂಗಡದ ರೈತರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿಗಳನ್ನು 2022-23 ನೇ ಸಾಲು ಸೇರಿದಂತೆ ಬಾಕಿ ಉಳಿದ ಹಿಂದಿನ ಸಾಲಿನಲ್ಲಿ ಆಯ್ಕೆಯಾದ ಒಟ್ಟು 17000 ಕ್ಕೂ ಹೆಚ್ಚು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ 1115 ಕೋಟಿ ರೂ ಗಳನ್ನು ವರ್ಗಾವಣೆಗೊಳಿಸಲಾಗುತ್ತಿದೆ ಇದಕ್ಕೆ ಅಗತ್ಯವಿರುವ ಡಿಬಿಟಿ ತಂತ್ರಾ0ಶವನ್ನು ಇಲಾಖೆ ವತಿಯಿಂದ ಸಿದ್ದಪಡಿಸಿ ಇ ರೂಪಿ ಮೂಲಕ ಪಾವತಿಸಲಾಗುವುದು ಎಂದರು.

ಫಲಾನುಭವಿಗಳು ಇಲಾಖೆವತಿಯಿಂದ ನೊಂದಾಯಿತ ಸಂಸ್ಥೆಗಳ ಮೂಲಕ ಕೊಳವೆ ಬಾವಿಗಳನ್ನು ಕೊರೆಸಲು
ಹಾಗೂ ತಮಗೆ ಅನುಕೂಲವಾಗುವ ಪಂಪ್‌ಸೆಟ್ ಗಳನ್ನು ಖರೀದಿ ಮಾಡಬಹುದಾಗಿದ್ದು, ಇದರಿಂದಾಗಿ ಯೋಜನೆಯ ಅನುಷ್ಠಾನದ ವಿಳಂಬತೆಯನ್ನು ತಡೆಯಲು ಹಾಗೂ ಪಾರದರ್ಶಕತೆಗೆ ಒತ್ತು ನೀಡಿದಂತಾಗುತ್ತದೆ ಎಂದರು. ಈಗಾಗಲೇ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿರುವ ಫಲಾನುಭವಿಗಳ ಪಟ್ಟಿಯನ್ನು ಜಿಲ್ಲೆಗೆ ವರ್ಗಾಯಿಸಲಾಗಿದ್ದು, ಸಮಿತಿಯು ಅರ್ಹ ಫಲಾನುಭವಿಗಳನ್ನು ನವೆಂಬರ್ ಆಂತ್ಯದ ಒಳಗೆ ಆಯ್ಕೆ ಮಾಡಲಿದೆ ಎಂದರು.

ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಬೆಳಗಾವಿ, ಕಲಬುರುಗಿ, ಧಾರವಾಡ, ದ.ಕನ್ನಡ ಮೈಸೂರು ಜಿಲ್ಲಾ ಕೇಂದ್ರಗಳಲ್ಲಿ ವಿದ್ಯಾರ್ಥಿನಿಲಯಗಳಿಗೆ ಸೇರ್ಪಡೆಯಾಗುವವರ ಸಂಖ್ಯೆ ಹೆಚ್ಚಿದ್ದು ವಿದ್ಯಾರ್ಥಿನಿಲಯಗಳ ಕೊರತೆ ಹಿನ್ನಲೆಯಲ್ಲಿ ದೀನ ದಯಾಳ್ ಉಪಾಧ್ಯಾಯ ಸೌಹಾರ್ದತಾ ವಿದ್ಯಾರ್ಥಿ ನಿಲಯಗಳನ್ನು ಬಾಡಿಗೆ ಕಟ್ಟಡಗಳಲ್ಲಿ ಈಗಾಗಲೇ ಪ್ರಾರಂಭಿಸಲಾಗಿದೆ. ಇವುಗಳಿಗೆ ಪ.ಜಾತಿ., ಪ.ಪಂಗಡ, ಹಿಂದುಳಿದ ವರ್ಗ, ಅಲ್ಪ ಸಂಖ್ಯಾತ ಒಳಗೊಂಡ ಎಲ್ಲಾ ಸಮುದಾಯಗಳಿಗೆ ಅವಕಾಶ ಕಲ್ಪಿಸಿದೆ ಇದಕ್ಕೆ ಅಗತ್ಯವಿರುವ ಸ್ವಂತ ಕಟ್ಟಡ ನಿರ್ಮಾಣವನ್ನು ಶೀಘ್ರದಲ್ಲಿಯೇ ನಿರ್ಮಿಸಲಾಗುವುದು ಎಂದರು. ಸOವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್ ಅವರು ಕರ್ನಾಟಕಕ್ಕೆ ಭೇಟಿ ನೀಡಿರುವ ಹಲವು ಸ್ಥಳಗಳನ್ನು ಗುರುತಿಸಿ ಅಭಿವೃದ್ದಿಪಡಿಸಲು ಸರ್ಕಾರ ಈಗಾಗಲೇ ಘೋಷಿಸಿದ್ದು,ಅವರು ಭೇಟಿ ನೀಡಿರುವ ಸ್ಥಳಗಳಾದ ಬೆಳಗಾವಿ ,ನಿಪ್ಪಾಣಿ, ಚಿಕ್ಕೋಡಿ, ವಿಜಯಪುರ, ಬೆಂಗಳೂರಿನ ಸದಾಶಿವ ನಗರ ಹಾಗೂ ಫೇಜರ್ ಟೌನ್ , ಹೊಳೆನರಸೀಪುರದ ರೈಲ್ವೆ ನಿಲ್ದಾಣ, ಹಾಸನ, ಕೋಲಾರದ ಕೆ.ಜಿಎಫ್, ಕಲಬುರ್ಗಿಯ ಚಿತ್ತಾಪುರ ತಾಲೂಕಿನ ವಾಡಿ ರೈಲ್ವೆ ನಿಲ್ದಾಣ ಹಾಗೂ ಧಾರವಾಢ ನಗರಗಳನ್ನು ಗುರುತಿಸಿ ಅಭಿವೃದ್ದಿಪಡಿಸಲು 20 ಕೋಟಿ ರೂ ಗಳನ್ನು ಆಯಾ ಜಿಲ್ಲಾಧಿಕಾರಿಗಳಿ ಗೆವರ್ಗಾಯಿಸಲಾಗಿದ್ದು,ಹೆಚ್ಚುವರಿ
ಅನುದಾನದ ಅಗತ್ಯವಿದ್ದಲ್ಲಿ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದರು.

Leave a Reply

Your email address will not be published. Required fields are marked *

error: Content is protected !!