ಉಡುಪಿ: ನಗರದ ಹೊಟೇಲ್’ವೊಂದರಲ್ಲಿ ಅಡುಗೆ ಅನಿಲ ಸೋರಿಕೆ

ಉಡುಪಿ,ನ.27(ಉಡುಪಿ ಟೈಮ್ಸ್ ವರದಿ): ನಗರದ ಸಿಟಿ ಬಸ್ ನಿಲ್ದಾಣದ ಬಳಿಯ ಹೋಟೆಲ್ ವೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ.

ನಗರದ ಮಧ್ಯಭಾಗದಲ್ಲಿರುವ ಟಾಪ್ ಇನ್ ಟೌನ್ ಹೋಟೆಲ್ ನ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡಿತ್ತು, ಹೊಟೇಲ್ ಸಿಬ್ಬಂದಿಗಳು ಬೆಂಕಿ ನಂದಿಸಲು ಪ್ರಯತ್ನ ಪಟ್ಟಿದ್ದರು. ಆದರೆ ಅದು ತಹಾಬದಿಗೆ ಬಾರದ ಕಾರಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರು.

ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದು. ಹೆಚ್ವಿನ ಅನಾಹುತ ಆಗುವುದನ್ನು ತಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!