ಉಡುಪಿ: ಕೊರೋನಾ ವಿಮುಕ್ತಿಗಾಗಿ ಬಿಜೆಪಿಯಿಂದ ಸಾಮೂಹಿಕ ಪ್ರಾರ್ಥನೆ
ಉಡುಪಿ:( ಉಡುಪಿ ಟೈಮ್ಸ್ ವರದಿ)ವಿಶ್ವದಾದ್ಯಂತ ಕೋವಿಡ್-19 ವಿಮುಕ್ತಿಗೆ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ, ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಗ್ಯ ವೃದ್ದಿಯಾಗಿ ದೇಶ ಸೇವೆ ಮತ್ತು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರಾರ್ಥಿಸಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮತ್ತು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಅವರು ಉಡುಪಿ ಶ್ರೀ ಕೃಷ್ಣ ಮಠ, ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ
ವಕ್ತಾರರಾದ ಶಿವಕುಮಾರ್ ಅಂಬಲಪಾಡಿ ಮತ್ತು ಗಿರೀಶ್ ಎಮ್. ಅಂಚನ್ ಉಪಸ್ಥಿತರಿದ್ದರು.