ಕೊಡಗು: ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ- ಆರೋಪಿಯ ಬಂಧನ 
ಸುಂಟಿಕೊಪ್ಪ: ಇಲ್ಲಿನ ಅಂದಗೋವೆ ಗ್ರಾಮದಲ್ಲಿ ಮೇಯಲು ಕಟ್ಟಿ ಹಾಕಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂಬ ಆರೋಪದ ಮೇಲೆ ಅಬೂಬ್ಬಕ್ಕರ್ ಸಿದ್ಧಿಕ್ ಎಂಬಾತನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಇಲ್ಲಿನ ಸ್ಥಳೀಯ ನಿವಾಸಿ ಸಿ.ಎ.ದೇವಯ್ಯ ಹಸು ಮೇಯಲು ಬಿಟ್ಟು ಸುಂಟಿಕೊಪ್ಪ ಸಂತೆಗೆ ಹೋಗಿದ್ದರು. ವಾಪಸ್ ಬಂದಾಗ ಅಬೂಬ್ಬಕ್ಕರ್ ಹಸುವಿನ ಮೇಲೆ ದೌರ್ಜನ್ಯ ಎಸಗುತ್ತಿದ್ದುದು ಕಂಡಿದೆ. ಅವರು ಸ್ಥಳೀಯರಿಗೆ ಮಾಹಿತಿ ನೀಡಿದ್ದರು. ಬಳಿಕ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.