ಉಡುಪಿ: ನಿಷೇಧಿತ ಪ್ಲಾಸ್ಟಿಕ್ ವಶ- ದಂಡ ವಸೂಲಿ

ಉಡುಪಿ: ನಗರಸಭೆಯ ಆರೋಗ್ಯ ಶಾಖೆಯ ಅಧಿಕಾರಿಗಳು ಆದಿ ಉಡುಪಿ ಎ.ಪಿ.ಎಮ್.ಸಿ ಮಾರುಕಟ್ಟೆ ಬಳಿ ನಿಷೇದಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದ ಮಾರುತಿ ಓಮಿನಿ ವಾಹನದ ಮೇಲೆ ಇಂದು ದಾಳಿ ನಡೆಸಿ 346 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 10 ಸಾವಿರ ರೂ. ದಂಡ ಹಾಗೂ ಅಜ್ಜರಕಾಡು ಪಾರ್ಕ್ ರಸ್ತೆ ಬಳಿ ತ್ಯಾಜ್ಯವನ್ನು ಸುಡುತ್ತಿರುವವರಿಗೆ 5000 ರೂ. ದಂಡ ವಿಧಿಸಿದರು.

ಕಾರ್ಯಾಚರಣೆಯಲ್ಲಿ ನಗರಸಭೆಯ ಪರಿಸರ ಅಭಿಯಂತರರು, ಸ್ಯಾನೀಟರಿ ಸೂಪರ್‌ವೈಸರ್ ಹಾಗೂ ಪೌರಕಾರ್ಮಿಕರು ಭಾಗವಹಿಸಿದ್ದರು.
ಸಾರ್ವಜನಿಕರು, ಉದ್ದಿಮೆದಾರರು ಹಾಗೂ ವ್ಯಾಪಾರಿಗಳು ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಉಪಯೋಗಿಸುವುದು ಕಂಡು ಬಂದಲ್ಲಿ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಿ, ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!