ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಸುಂದರ್ ರಾವ್ ವಿಧಿವಶ

ಮಂಗಳೂರು: ಬಿಜೆಪಿ ಪಕ್ಷದ ಹಿರಿಯ ಮುಖಂಡ, ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ, ಕಲಾವಿದ ಕುಂಬಳೆ ಸುಂದರ್ ರಾವ್ (88) ಇಂದು ಮುಂಜಾನೆ ನಿಧನ ಹೊಂದಿದರು.

ಯಕ್ಷಗಾನದ ತೆಂಕತಿಟ್ಟು ಶೈಲಿಯ ಕಲಾವಿದರಾಗಿದ್ದ  ಇವರು ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಅನೇಕ ವರ್ಷಗಳ ಕಾಲ ದುಡಿದ್ದರು.

1994 ರಿಂದ 1999 ರವರೆಗೆ ಸುರತ್ಕಲ್ ಕ್ಷೇತ್ರದಿಂದ ಹತ್ತನೇ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದರು.

ಅವರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಅಂತ್ಯ ಸಂಸ್ಕಾರ ನಾಳೆ ನೆರವೇರಲಿದೆ. ಸಾರ್ವಜನಿಕರಿಗೆ ವೀಕ್ಷಣೆಗೆ ಮಂಗಳೂರು ಪಂಪೈಲ್ ಬಳಿ ಇರುವ ಅವರ ಮನೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ್ ರಾವ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ನವದೆಹಲಿ, ನ. 30: ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸುರತ್ಕಲ್ ಹಾಗೂ ಧರ್ಮಸ್ಥಳ ಮೇಳಗಳಲ್ಲಿ ಯಕ್ಷಗಾನ ಕಲಾವಿದರಾಗಿ ಸೇವೆ ಸಲ್ಲಿಸಿದ್ದ ಅವರು ತಮ್ಮ ಪ್ರಾಸಬದ್ಧ , ನಿರರ್ಗಳ ಅರ್ಥಗಾರಿಕೆಯಿಂದ ಮನೆಮಾತಾಗಿದ್ದರು. ಶಾಸಕರಾಗಿ, ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಅವರ ಸೇವೆ ಸ್ಮರಣೀಯ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸು ವುದಾಗಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!