ಕಾರ್ಕಳ: ಮನೆಗೆ ನುಗ್ಗಿ 2.31ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳವು

ಕಾರ್ಕಳ ನ.30(ಉಡುಪಿ ಟೈಮ್ಸ್ ವರದಿ): ನಗರ ಠಾಣಾ ವ್ಯಾಪ್ತಿಯಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು 2.31 ಲಕ್ಷ ರೂ. ಮೌಲ್ಯದ ನಗ ನಗದು ದೋಚಿ ಪರಾರಿಯಾಗಿದ್ದಾರೆ.

ನ.29ರಂದು ಬೆಳಿಗ್ಗೆಯಿಂದ ಮಧ್ಯಾಹ್ನದ ಅವಧಿಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಮನೆಯ ಕಪಾಟಿನಲ್ಲಿ ಇದ್ದ 11,000 ರೂ. ನಗದು ಹಾಗೂ 2,31,000 ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಮಾಡಿಕೊಂಡು ಹೋಗಿದ್ದಾರೆ.

ಈ ಬಗ್ಗೆ ಸವಿತಾ ಎಂಬವರು ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!