ಗುಜರಾತ್ ಚುನಾವಣೆ: ಮೊದಲನೆ ಹಂತದ ಮತದಾನ ಮುಕ್ತಾಯ, ಶೇ. 57.48 ರಷ್ಟು ಮತದಾನ

ಅಹಮದಾಬಾದ್: ಗುಜರಾತ್‌ ವಿಧಾನಸಭೆ ಚುನಾವಣೆಯ ಮೊದಲನೆ ಹಂತದ ಮತದಾನ ಪ್ರಕ್ರಿಯೆ ಗುರುವಾರ ಮುಕ್ತಾಯಗೊಂಡಿದ್ದು,  ಸಂಜೆ 5 ಗಂಟೆಯವರೆಗೆ ಶೇ. 57.24 ರಷ್ಟು ಮತದಾನವಾಗಿದೆ.

ಇಂದು ಬೆಳಗ್ಗೆ 8 ಗಂಟೆಯಿಂದ ಬಿಗಿ ಭದ್ರತೆಯೊಂದಿಗೆ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆಯವರೆಗೆ ಶೇ.57.24 ರಷ್ಟು ಮತದಾನವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ 27 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ಈಗ ಮತ್ತೆ ಅಧಿಕಾರಕ್ಕೆ ಬರಲು ತೀವ್ರ ಹೋರಾಟ ನಡೆಸುತ್ತಿದೆ. ಮೊದಲ ಹಂತದಲ್ಲಿ, ಸೌರಾಷ್ಟ್ರ-ಕಚ್ ಪ್ರದೇಶ ಮತ್ತು ದಕ್ಷಿಣ ಭಾಗಗಳು ಸೇರಿದಂತೆ ಒಟ್ಟು 19 ಜಿಲ್ಲೆಗಳ 89 ವಿಧಾನಸಭಾ ಕ್ಷೇತ್ರದಲ್ಲಿ ಇಂದು ಮತದಾನ ನಡೆದಿದ್ದು, ಒಟ್ಟು 788 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್ ಎಲ್ಲಾ 89 ಸ್ಥಾನಗಳಲ್ಲಿ ಸ್ಪರ್ಧಿಸುದ್ದು, ಹೊಸದಾಗಿ ಎಂಟ್ರಿಕೊಟ್ಟಿರುವ ಎಎಪಿ 88 ಸ್ಥಾನಗಳಲ್ಲಿ ಸ್ಪರ್ಧಿಸಿದೆ. 339 ಪಕ್ಷೇತರ ಅಭ್ಯರ್ಥಿಗಳು ಸಹ ಕಣದಲ್ಲಿದ್ದಾರೆ. ಚುನಾವಣೆಯಲ್ಲಿ ಕೇವಲ 70 ಮಹಿಳಾ ಅಭ್ಯರ್ಥಿಗಳು ಮಾತ್ರ ಕಣದಲ್ಲಿದ್ದು,  ಬಿಜೆಪಿಯಿಂದ ಒಂಬತ್ತು, ಕಾಂಗ್ರೆಸ್‌ನಿಂದ ಆರು ಮತ್ತು ಎಎಪಿಯಿಂದ ಐವರು ಸ್ಪರ್ಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!