ಉಪ್ಪೂರು: ನಿಯಂತ್ರಣ ತಪ್ಪಿ ರಸ್ತೆ ಬದಿಯ ಕೆರೆಗೆ ಬಿದ್ದ ಟೂರಿಸ್ಟ್ ಕಾರು

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಟೂರಿಸ್ಟ್ ಕಾರೊಂದು ರಸ್ತೆ ಬರಿಯ ಕೆರೆಗೆ ಬಿದ್ದ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಅದೃಷ್ಟವಶಾತ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಉಡುಪಿ ಜಿಲ್ಲೆಯ ನೋಂದಣಿ ಸಂಖ್ಯೆ ಹೊಂದಿರುವ ಟೂರಿಸ್ಟ್ ಕಾರು ಇದಾಗಿದ್ದು, ಪ್ರಯಾಣಿಕರನ್ನು ಬಿಟ್ಟು ಬರುತ್ತಿರುವ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ನಿನ್ನೆ ತಡರಾತ್ರಿ ಬ್ರಹ್ಮಾವರದಿಂದ ಉಡುಪಿ ಕಡೆಗೆ ಬರುತ್ತಿದ್ದ ವೇಳೆ ಉಪ್ಪೂರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಆ ಬಳಿಕ ರಸ್ತೆಯ ಬದಿಯ ಕೆರೆಗೆ ಬಿದ್ದಿದೆ ಎನ್ನಲಾಗಿದೆ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಚಾಲಕನ ನಿರ್ಲಕ್ಷ್ಯ ಮತ್ತು ಅತೀ ವೇಗದ ಚಾಲನೆಯೇ ಈ ಅವಘಡಕ್ಕೆ ಕಾರಣ ಎಂದು ತಿಳಿದುಬಂದಿದೆ. ಕೆರೆಗೆ ಬಿದ್ದ ಕಾರನ್ನು ಇಂದು ಬೆಳಿಗ್ಗೆ ಕ್ರೈನ್ ಮೂಲಕ ಮೇಲೆತ್ತಲಾಯಿತು.

Leave a Reply

Your email address will not be published. Required fields are marked *

error: Content is protected !!