ಗ್ರಾಮ ಪಂಚಾಯತ್ ಚುನಾವಣೆಗೆ ಮಾರ್ಗಸೂಚಿ
ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯ ಸಂಬಂದ ,ರಾಜ್ಯ ಚುನಾವಣಾ ಆಯೋಗ ಮಾರ್ಗಸೂಚಿ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ.
ಕೋವಿಡ್ ಪೀಡಿತರಿಗೂ ಸ್ಪರ್ಧೆಗೆ ಅವಕಾಶ, ಪ್ರಚಾರದ ವೇಳೆ ಅಭ್ಯರ್ಥಿ ಜತೆ 5 ಮಂದಿಗೆ ಮಾತ್ರ, ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ, ಗೆದ್ದ ಮೇಲೆ ವಿಜಯೋತ್ಸವ ಆಚರಣೆ ಇಲ್ಲ -ಇವು ಗ್ರಾಮ ಪಂಚಾಯತ್ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ರಾಜ್ಯ ಚುನಾವಣ ಆಯೋಗ ಬಿಡುಗಡೆ ಮಾಡಿರುವ ಪ್ರಮಾಣಿತ ಕಾರ್ಯನಿರ್ವಹಣ ವಿಧಾನ ಕರಡು ಮಾರ್ಗಸೂಚಿಗಳು.
ಚುನಾವಣಾ ಕರ್ತವ್ಯದಲ್ಲಿರುವ ಪ್ರತಿಯೊಬ್ಬ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಚುನಾವಣೆ ಕೊಠಡಿ ಪ್ರವೇಶಿಸುವ ಮುನ್ನ ಸ್ಯಾನಿಟೈಸ್ ಮಾಡಿಕೊಳ್ಳಬೇಕು. ಜೊತೆಗೆ ದೈಹಿಕ ಉಷ್ಣಾಂಶ ಪರೀಕ್ಷೆ ಮಾಡಿಸಿಕೊಳ್ಳುವ ಜೊತೆಗೆ ಸಾಧ್ಯವಾದಷ್ಟು ವಿಶಾಲವಾದ ಕೊಠಡಿಯಲ್ಲಿ ಚುನಾವಣಾ ಕೆಲಸ ನಡೆಯಬೇಕು ಎಂದು ಹೇಳಿದೆ.
ಚುನಾವಣೆಗೆ ಸಂಬಂಧಿಸಿದ ಕಡತಗಳು ದಸ್ತಾವೇಜುಗಳು ಸಂಪೂರ್ಣವಾಗಿ ಸೋಂಕು ನಿವಾರಕ ಕೊಠಡಿಯಲ್ಲಿ ಬಿಡಬೇಕು ಜೊತೆಗೆ ಅದರ ಕರ್ತವ್ಯಕ್ಕೆ ಸಿಬ್ಬಂದಿಯನ್ನು ನಿಯೋಜಿಸಬೇಕು ಅವರ ಮಾತ್ರ ಒಳಗೆ ಹೋಗಲು ಅವಕಾಶ ಕಲ್ಪಿಸಿ ಹೊಸಕರಡು ಮಾರ್ಗಸೂಚಿಯಲ್ಲಿ ಪ್ರಕಟಿಸಲಾಗಿದೆ.
ಚುನಾವಣಾಧಿಕಾರಿಗಳು ನಾಮಪತ್ರ ಸ್ವೀಕರಿಸುವ ವೇಳೆ ಫೇಸ್ ಮಾಸ್ಕ್ ಧರಿಸಬೇಕು. ಕೈಗಳಿಗೆ ಗ್ಲೌಸ್ ಕಡ್ಡಾಯವಾಗಿ ಧರಿಸಬೇಕು.ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಅಭ್ಯರ್ಥಿ ಮತ್ತು ಒಬ್ಬ ಸೂಚಕನಿಗೆ ಮಾತ್ರ ಚುನಾವಣಾಧಿಕಾರಿ ಕೊಠಡಿ ಪ್ರವೇಶಿಸಲು ಅವಕಾಶವಿರುತ್ತದೆ. ಕೊರೋನಾ ಪಾಸಿಟಿವ್ ವ್ಯಕ್ತಿ ನಾಮಪತ್ರ ಸಲ್ಲಿಸಲು ಇಚ್ಛಿಸಿದರೇ ಸೂಚಕರ ಮೂಲಕ ನಾಮಪತ್ರ ಸಲ್ಲಿಸಬಹುದು ಎಂದು ತಿಳಿಸಿದೆ.
ನಾಮಪತ್ರ ಪರಿಶೀಲನೆ ವೇಳೆ ಕ್ಷೇತ್ರವಾರು ಹಾಜರಿರುವ ಅಭ್ಯರ್ಥಿಗಳ ಸಮ್ಮುಖದಲ್ಲಿ ಮಾಡಬೇಕು.ಚುನಾವಣಾ ಪ್ರಚಾರದ ವೇಳೆ ಸಾಮಾಜಿಕ ಅಂತರ ಕಾಯ್ದುಕೊಂಡು ಐದು ಮಂದಿಗೆ ಮಾತ್ರ ಪ್ರಚಾರ ಮಾಡಲು ಅವಕಾಶವಿರುತ್ತದೆ. ಪ್ರಚಾರದ ವೇಳೆ ಫೇಸ್ ಮಾಸ್ಕ್ ಧರಿಸಬೇಕು. ಅಭ್ಯರ್ಥಿಗಳು ಪ್ರಚಾರಕ್ಕಾಗಿ ನಿಯಮಾನುಸಾರ ಮುದ್ರಿಸಿದ ಕರಪತ್ರಗಳನ್ನ ಹಂಚುವಾಗ ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸಬೇಕು ಎನ್ನುವ ನಿರ್ಬಂಧ ವಿದಿಸಲಾಗಿದೆ.
ಮತದಾನದ ದಿನ ಮತಗಟ್ಟೆ ಅಧಿಕಾರಿಗಳು ಫೇಸ್ ಮಾಸ್ಕ್ ಹ್ಯಾಂಡ್ ಗ್ಲೌಸ್ ಧರಿಸಬೇಕು. ಮತದಾರರು ಫೇಸ್ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಮತದಾನ ಮಾಡಬೇಕು. ಮತದಾನ ಕೊಠಡಿ ಪ್ರವೇಶಿಸುವ ವೇಳೆ ಕೋವಿಡ್ ಥರ್ಮಲ್ ಜ್ವರ ತಪಾಸಣೆ ಕಡ್ಡಾಯ ಮಾಡಬೇಕು ಎಂದು ರಾಜ್ಯ ಚುನಾವಣಾ ಆಯೋಗ ತನ್ನ ಹತ್ತು ಪುಟಗಳ ಸುದೀರ್ಘ ಮಾರ್ಗಸೂಚಿಯನ್ನು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯ ಚುನಾವಣಾ ಆಯೋಗ ದಿನಾಂಕ ಪ್ರಕಟಿಸುತ್ತಿದ್ದಂತೆ ತಾವು ಚುನಾವಣೆಯನ್ನು ನಡೆಸಲು ಸಿದ್ಧವಿರುವುದಾಗಿ ಈಗಾಗಲೇ ಸರ್ಕಾರ ಪ್ರಕಟಿಸಿದ ಗ್ರಾಮಪಂಚಾಯತಿಗಳ ಚುನಾವಣೆ ನಡೆಯುವ ಸಾಧ್ಯತೆಗಳು ಇವೆ.
ಕೇಂದ್ರ ಗೃಹ ಸಚಿವಾಲಯ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕೋವಿಡ್ ನಿಯಂತ್ರಣಕ್ಕೆ ಕಾಲಕಾಲಕ್ಕೆ ಮಾರ್ಗಸೂಚಿಗಳನ್ನು ಹೊರಡಿಸುತ್ತದೆ. ಅದರಂತೆ ಗ್ರಾ.ಪಂ. ಸಾರ್ವತ್ರಿಕ ಚುನಾವಣೆ ನಡೆಸುವ ನಿಟ್ಟಿನಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತಾಂತ್ರಿಕ ತಜ್ಞರೊಂದಿಗೆ 2020ರ ಆ. 18ರಂದು ಚರ್ಚಿಸಿದ್ದು, ಅವರ ಸಲಹೆಗಳನ್ನು ಪರಿಗಣಿಸಿ ಎಸ್‌ಒಪಿ ರಚಿಸಲಾಗಿದೆ ಎಂದು ಆಯೋಗ ತಿಳಿಸಿದೆ.