ಎಎಪಿಯನ್ನು ರಾಷ್ಟ್ರೀಯ ಪಕ್ಷವೆಂದು ಘೋಷಿಸಿದ ಅರವಿಂದ ಕೇಜ್ರೀವಾಲ್
ನವದೆಹಲಿ, ಡಿ 08: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಅವರು ತಮ್ಮ ಆಮ್ ಆದ್ಮಿ ಪಕ್ಷವನ್ನು ರಾಷ್ಟ್ರೀಯ ಪಕ್ಷವೆಂದು ಗುರುವಾರ ಘೋಷಣೆ ಮಾಡಿದ್ದಾರೆ.
ಇಂದು ಗುಜರಾತ್ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಆಮ್ ಆದ್ಮಿ ಪಕ್ಷವು ರಾಷ್ಟ್ರೀಯ ಪಕ್ಷವಾಗಿ ಹೊಸ ರೂಪ ಪಡೆದುಕೊಂಡಿದೆ. 10 ವರ್ಷಗಳ ಹಿಂದೆ ಚಿಕ್ಕ ಪಕ್ಷವಾಗಿದ್ದು ಎಎಪಿ, ಪ್ರಸ್ತುತ ಎರಡು ರಾಜ್ಯಗಳಲ್ಲಿ ಸರ್ಕಾರ ನಡೆಸುತ್ತಿದೆ. ಇದೇ ಸಂದರ್ಭದಲ್ಲಿ ನಮ್ಮ ಪಕ್ಷ ರಾಷ್ಟ್ರೀಯ ಪಕ್ಷವಾಗಿ ಮಾರ್ಪಟ್ಟಿದೆ ಎಂದು ವೀಡಿಯೋ ಭಾಷಣದಲ್ಲಿ ಅವರು ಹೇಳಿದ್ದಾರೆ. ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷವು ಶೇ.6 ಕ್ಕಿಂತ ಹೆಚ್ಚುಮತಗಳನ್ನು ಪಡೆದುಕೊಂಡಿದೆ. ಇದು ಖಂಡಿತಾ ನಮ್ಮ ಸಾಧನೆಯೇ. ರಾಜ್ಯದಲ್ಲಿ ಪಕ್ಷಕ್ಕೆ ಸಂಬಂಧಿಸಿದವರೆಲ್ಲರೂ ಸಕಾರಾತ್ಮಕವಾಗಿ ಪ್ರಚಾರ ನಡೆಸಿದ ಫಲವಾಗಿ ಇಷ್ಟು ಮತಗಳನ್ನು ಪಡೆಯಲು ಸಾಧ್ಯವಾಗಿದೆ ಎಂದವರು ಇದೇ ವೇಳೆ ಶ್ಲಾಘಿಸಿದರು.