ಜೆಇಇ, ನೀಟ್ ಪರೀಕ್ಷೆ ಆದೇಶ ಮರುಪರಿಶೀಲನಾ ಅರ್ಜಿ ವಜಾ: ಸುಪ್ರೀಂ ಕೋರ್ಟ್
ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ರೋಗಕಾರಣದಿಂದ ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡಬೇಕೆಂದು ಕೋರಿ ಆರು ರಾಜ್ಯಗಳ ಬಿಜೆಪಿಯೇತರ ಪಕ್ಷಗಳ ನಾಯಕರು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸೆಪ್ಟೆಂಬರ್ 4 ರಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಬಾಕಿ ಉಳಿದ ಜೆಇಇ ಮುಳ್ಯ ಪ್ರಈಕ್ಷೆಗಳು ಸೆಪ್ಟೆಂಬರ್ 5 ಮತ್ತು 6 ರಂದು ನಿಗದಿಯಂತೆ ನಡೆಯಲಿದ್ದು, ಸೆಪ್ಟೆಂಬರ್ 13 ರಂದು ನೀಟ್ ನಡೆಸಲಾಗುವುದು.
ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಬಿ.ಆರ್.ಗವಾಯಿ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ನ್ಯಾಯಪೀಠವು ಪರಿಶೀಲನಾ ಅರ್ಜಿಯ ವಿಚಾರಣೆ ನಡೆಸಿದೆ.
ಈ ಹಿಂದೆ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮತ್ತು ಸೆಪ್ಟೆಂಬರ್ನಲ್ಲಿ ನಿಗದಿಯಾಗಿದ್ದ ರಾಷ್ಟ್ರೀಯ ಅರ್ಹತೆ ಕಂ ಪ್ರವೇಶ ಪರೀಕ್ಷೆ (ನೀಟ್) ಅನ್ನು ಮುಂದೂಡಬೇಕೆಂಬ ಮನವಿಯನ್ನು ಸುಪ್ರೀಂ ಕೋರ್ಟ್ ಆಗಸ್ಟ್ 17 ರಂದು ವಜಾಗೊಳಿಸಿತ್ತು. ಆರು ರಾಜ್ಯಗಳಾದ – ಬಂಗಾಳ, ಜಾರ್ಖಂಡ್, ರಾಜಸ್ಥಾನ, ಛತ್ತೀಸ್ ಘರ್, ಪಂಜಾಬ್ ಮತ್ತು ಮಹಾರಾಷ್ಟ್ರದ ನಾಯಕರು ಸುಪ್ರೀಂ ಕೋರ್ಟ್ ತೀರ್ಪು ಮರುಪರಿಶೀಲನೆ ಮಾಡಬೇಕೆಂದು ಅರ್ಜಿ ಸಲ್ಲಿಸಿದ್ದರು.