ಡಾ.ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆ- ಜ.1-10 ವರೆಗೆ 31ನೇ ವರ್ಷದ ಮದ್ಯವ್ಯಸನ ವಿಮುಕ್ತಿ ಶಿಬಿರ
ಉಡುಪಿ ಡಿ.23(ಉಡುಪಿ ಟೈಮ್ಸ್ ವರದಿ): ಇಲ್ಲಿನ ಡಾ. ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆಯಲ್ಲಿ ಜ.1 ರಿಂದ ಜ.10 ರ ವರೆಗೆ 31ನೇ ವರ್ಷದ ಮದ್ಯವ್ಯಸನ ವಿಮುಕ್ತಿ ಶಿಬಿರವು ನಡೆಯಲಿದೆ ಎಂದು ವಿರೂಪಾಕ್ಷ ದೇವರಮನೆ ತಿಳಿಸಿದ್ದಾರೆ.
ಈ ಬಗ್ಗೆ ಇಂದು ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಶಿಬಿರದ ಉದ್ಘಾಟನೆಯು ಜ.1 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಮದ್ಯವ್ಯಸನ ವಿಮುಕ್ತಿ ಶಿಬಿರವನ್ನು ಪ್ರಸಾದ್ ಸೇತ್ರಾಲಯದ ನೇತ್ರತಜ್ಞರು ಮತ್ತು ವೈದ್ಯಕೀಯ ನಿರ್ದೇಶಕ ಡಾ.ಕೃಷ್ಣಪ್ರಸಾದ್ ಅವರು ಉದ್ಘಾಟಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೆ.ಎಂ.ಸಿಯ ಸಮುದಾಯ ಆರೋಗ್ಯ ವಿಭಾಗದ ಸಹಾಯ ಪ್ರಾಧ್ಯಾಪಕ ಡಾ. ಮುರುಳಿಧರ್ ಎಂ.ಕುಲಕರ್ಣಿ, ಡಾ.ಎ.ವಿ.ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕರಾದ ಡಾ.ಪಿ.ವಿ ಭಂಡಾರಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಶಿಬಿರದ ಸಮಾರೋಪ ಸಮಾರಂಭವು ಜ.10 ರಂದು ಬೆಳಿಗ್ಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ವೃತ್ತದ ಸಹಾಯಕ ಔಷಧ ನಿಯಂತ್ರಕ ಶಂಕರ್ ನಾಯ್ಕ್ ಹೆಚ್.ಎಸ್, ಉಡುಪಿ-ಕರಾವಳಿಯ ಭಾರತೀಯ ವೈದ್ಯಕೀಯ ಸಂಘದ ಕಾರ್ಯದರ್ಶಿ ಡಾ.ಕೇಶವ್ ನಾಯಕ್, ಉಡುಪಿಯ ಸುನಾಗ್ ಆಸ್ಪತ್ರೆಯ ಮೂಳೆ ರೋಗ ತಜ್ಞ ಡಾ.ನರೇಂದ್ರ ಕುಮಾರ್ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಹಾಗೂ ಶಿಬಿರಕ್ಕೆ ದಾಖಲಾಗುವ ಶಿಬಿರಾರ್ಥಿಗಳಿಂದ 500 ರೂ. ಶುಲ್ಕವನ್ನು ಪಡೆಯುತ್ತಿದ್ದು ಶಿಬಿರಾರ್ಥಿಗಳಿಗೆ ತಗಲುವ ಊಟ, ವಸತಿ, ಚಿಕಿತ್ಸೆಯ ವೆಚ್ಚವನ್ನು ಕಮಲ್ ಎ. ಬಾಳಿ ಚಾರಿಟೇಬಲ್ ಟ್ರಸ್ಟ್ ಭರಿಸುತ್ತಿದೆ ಎಂದು ಮಾಹಿತಿ ನೀಡಿದರು.