ಉಡುಪಿ ವಿಜ್ಞಾನ ಕೇಂದ್ರ ಉದ್ಘಾಟಿಸಿದ ಕೇಂದ್ರ ಸಚಿವ ಅನುರಾಗ್ ಸಿಂಗ್
ಉಡುಪಿ ಡಿ.24(ಉಡುಪಿ ಟೈಮ್ಸ್ ವರದಿ): ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿಯ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆರಂಭಿಸಿರುವ ವಿಜ್ಞಾನ ಕೇಂದ್ರದ ಉದ್ಘಾಟನಾ ಸಮಾರಂಭ ಇಂದು ನಡೆಯಿತು.
ಈ ವಿಜ್ಞಾನ ಕೇಂದ್ರವನ್ನು ಕೇಂದ್ರ ಯುವ ವ್ಯವಹಾರಗಳು ಹಾಗೂ ಕ್ರೀಡೆ, ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್ ಅವರು ಪ್ರಾಸ್ತಾವಿಕ ಮಾತನಾಡಿದರು.
ಇದೇ ವೇಳೆ ಶಾಸಕ ರಘುಪತಿ ಭಟ್ ಅವರು, ಬ್ರಹ್ಮಾವರದ ಆಕಾಶವಾಣಿ ಜಾಗದಲ್ಲಿ ಎಫ್.ಎಂ. ಕೇಂದ್ರ ಸ್ಥಾಪನೆ ಮತ್ತು ಜಿಲ್ಲೆಯಲ್ಲಿ ಕ್ರೀಡಾ ವಿಜ್ಞಾನ ಸಂಶೋಧನೆ ಕೇಂದ್ರ ಆರಂಭಿಸಲು ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜ್ಯದ ರೇಷ್ಮೆ ಕೃಷಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ಕೆ.ಸಿ ನಾರಾಯಣ ಗೌಡ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಜಿಲ್ಲಾಧಿಕಾರಿ ಕೂರ್ಮಾರಾವ್, ಜಿ.ಪಂ. ಸಿಇಒ ಪ್ರಸನ್ನ, ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ,ಮಣಿಪಾಲ್ ವಿ ವಿ ಯ ಹೆಚ್.ಎಸ್. ಬಲ್ಲಾಳ್, ಕಿಶೋರ್ ಕುಮಾರ್ ಮಂಗಳೂರು ವಿವಿ ರಿಜಿಸ್ಟ್ರಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಉಪಸ್ಥಿತರಿದ್ದರು.