ಅಮಾಸೆಬೈಲು- ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
ಅಮಾಸೆಬೈಲು ಡಿ.26(ಉಡುಪಿ ಟೈಮ್ಸ್ ವರದಿ): ಬಾವಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಮಾಸೆಬೈಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶೀಲಾವತಿ ಆತ್ಮಹತ್ಯೆ ಮಾಡಿಕೊಂಡವರು.ಇವರ ಗಂಡ ಒಂದು ವರ್ಷದ ಹಿಂದೆ ಕರೋನಾದಿಂದ ಮೃತಪಟ್ಟಿದ್ದು ಇದೇ ಕಾರಣದಿಂದ ಮಾನಸಿಕವಾಗಿ ಬಳಲುತ್ತಿದ್ದರು. ಇದಕ್ಕಾಗಿ ಕುಂದಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರು ನಿನ್ನೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ತಮ್ಮ ಗಂಡ ತೀರಿ ಹೋದ ಚಿಂತೆಯಿಂದ ಮಾನಸಿಕವಾಗಿ ನೊಂದು ಮನೆಯ ಬಾವಿಗೆ ಹಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂಬುದಾಗಿ ಮೃತರ ಸಂಬಂಧಿ ಜೀವನ ಕುಲಾಲ್ ಎಂಬವರು ನೀಡಿದ ಮಾಹಿತಿಯಂತೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.