ಅನ್ಲಾಕ್ 4 ಎಫೆಕ್ಟ್: ಮುಂಬೈ ಒಂದೇ ದಿನ 20 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿ
ಮುಂಬೈ: ಲಾಕ್ಡೌನ್ ನಿರ್ಬಂಧಗಳು ಸಡಿಲಗೊಂಡಂತೆ ಮಹಾರಾಷ್ಟ್ರದಲ್ಲಿ ಶನಿವಾರ ಒಂದೇ ದಿನ 20 ಸಾವಿರಕ್ಕೂ ಹೆಚ್ಚು ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.
ಮಹಾರಾಷ್ಟ್ರದಲ್ಲಿ ಇಂದು, 20,489 ಮಂದಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಮಹಾಮಾರಿಗೆ 312 ಮಂದಿ ಬಲಿಯಾಗಿದ್ದಾರೆ. 10,801 ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ ಆಗಿದ್ದಾರ.
ಮುಂಬೈನಲ್ಲಿ 1,737 ಹೊಸ ಪ್ರಕರಣಗಳು ಮತ್ತು 33 ಸಾವುನೋವುಗಳು ವರದಿಯಾಗಿದ್ದು, ಇದರೊಂದಿಗೆ ವಾಣಿಜ್ಯ ನಗರಿಯ ಸೋಂಕಿತರ ಸಂಖ್ಯೆ 1,53,712 ಮತ್ತು ಸಾವಿನ ಸಂಖ್ಯೆ 7,832ಕ್ಕೆ ತಲುಪಿದೆ.
ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಅತಿ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದ್ದು, ದೇಶದಲ್ಲಿ ಕೊವಿಡ್-19-19 ಪ್ರಕರಣಗಳ ಸಂಖ್ಯೆ 40 ಲಕ್ಷ ಗಡಿ ದಾಟಿದೆ.