ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ರಾಜಕೀಯ ಪಕ್ಷಗಳು ಅಧಿಕಾರಕ್ಕಾಗಿ ತೀವ್ರ ಕಸರತ್ತು ನಡೆಸುತ್ತಿವೆ. ಪ್ರತಿಪಕ್ಷ ಕಾಂಗ್ರೆಸ್ ರಾಜ್ಯದ ಮತದಾರರನ್ನು ತನ್ನತ್ತ ಸೆಳೆಯಲು ಭರ್ಜರಿ ಆಫರ್ ನೀಡಿದ್ದು, ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಬುಧವಾರ ಘೋಷಿಸಿದೆ.

ಇಂದು ಚಿಕ್ಕೋಡಿಯಲ್ಲಿ ನಡೆದ ಕಾಂಗ್ರೆಸ್‌ ಪ್ರಜಾಧ್ವನಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಹದಗೆಟ್ಟ ಹಣದುಬ್ಬರದಿಂದ ತತ್ತರಿಸಿರುವ ರಾಜ್ಯದ ಜನರ ಬದುಕಿಗೆ ಬೆಳಕು ನೀಡಲು ಪ್ರತಿ ಮನೆಗೆ 200 ಯೂನಿಟ್‌ವರೆಗೆ ಉಚಿತವಾಗಿ ವಿದ್ಯುತ್ ನೀಡಲಿದೆ ಎಂದು ಹೇಳಿದರು.

ಕಾಂಗ್ರೆಸ್‌ನ ಪ್ರಜಾಧ್ವನಿ ಬಸ್‌ ಯಾತ್ರೆಗೆ ಚಾಲನೆ ನೀಡಿರುವುದು ಐತಿಹಾಸಿಕ ಘಟನೆ ಎಂದ ಶಿವಕುಮಾರ್‌, ‘ಕಾಂಗ್ರೆಸ್‌ ಪಕ್ಷವು ಯಾತ್ರೆ ಮೂಲಕ ಜನರ ಸಮಸ್ಯೆ, ನೋವುಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಯತ್ನಿಸುತ್ತಿದೆ. ಮತ್ತು `ಪ್ರತಿಧ್ವನಿ'(ಪ್ರತಿಧ್ವನಿ) ಯಂತೆಯೇ ಪ್ರತಿಕ್ರಿಯಿಸುತ್ತದೆ. ರಾಜ್ಯದ ಜನರ ಜನಜೀವನದಲ್ಲಿ ಬೆಳಕು ಚೆಲ್ಲುವುದು ಮತ್ತು ಅವರ ಸಮಸ್ಯೆಗಳನ್ನು ಪರಿಹರಿಸುವುದು ಪ್ರತಿಧ್ವನಿ ಬಸ್ ಯಾತ್ರೆಯ ಉದ್ದೇಶವಾಗಿದೆ’’ ಎಂದರು.

ಮೂರು ವರ್ಷಗಳ ಹಿಂದೆ ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿ, ನಂತರ ವಿವಿಧ ಹಗರಣಗಳಲ್ಲಿ ಭಾಗಿಯಾಗಿರುವ ತನ್ನ ಸಚಿವರಿಗೆ ಕ್ಲೀನ್ ಚಿಟ್ ನೀಡುವ ಮೂಲಕ `ಬಿ-ರಿಪೋರ್ಟ್’ ಸರ್ಕಾರವಾಯಿತು ಎಂದು ಆರೋಪಿಸಿದರು.

ರಾಜ್ಯ ಸರ್ಕಾರವನ್ನು 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಟೀಕಿಸಿದ ಡಿಕೆಶಿ, `ರಾಜ್ಯ ಸರ್ಕಾರವು ಜನರಲ್ಲಿ ಕೋಮುದ್ವೇಷದ ಬೀಜಗಳನ್ನು ಬಿತ್ತುತ್ತಿದೆ ಮತ್ತು ಹೋಟೆಲ್ ಮೆನು ಕಾರ್ಡ್‌ನಂತೆ ದರ ನಿಗದಿಪಡಿಸಿ(ಲಂಚ) ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ವಾಗ್ದಾಳಿ ನಡೆಸಿದರು.

ಬೆಲೆಯೇರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ನೆಮ್ಮದಿ ನೀಡುವ ಯೋಜನೆಯನ್ನು ನಾವು ಘೋಷಿಸುತ್ತಿದ್ದೇವೆ ಎಂದು ಕಾಂಗ್ರೆಸ್ ಹೇಳಿದೆ.ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ಒದಗಿಸುವ ‘ಗೃಹಜ್ಯೋತಿ’ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ನಿಮ್ಮ ವಿದ್ಯುತ್ ಬಿಲ್ ಇನ್ಮುಂದೆ ಕಾಂಗ್ರೆಸ್ ಜವಾಬ್ದಾರಿ. ಇದು ಕಾಂಗ್ರೆಸ್ ಗ್ಯಾರಂಟಿ ಎಂದು ಹೇಳಿದೆ.

Leave a Reply

Your email address will not be published. Required fields are marked *

error: Content is protected !!