ಮಂಗಳೂರು: ಗಾಂಜಾ ಮಾರಾಟ- ಮತ್ತೆ ಮೂವರ ಸೆರೆ
ಮಂಗಳೂರು ಜ.12: ನಗರದಲ್ಲಿ ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮೂವರನ್ನು ಬಂಧಿಸಲಾಗಿದ್ದು ಈ ಮೂಲಕ ಪ್ರಕರಣದ ಬಂಧಿತರ ಸಂಖ್ಯೆ13 ಕ್ಕೆ ಏರಿಕೆಯಾಗಿದೆ.
ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ Pathology MD ಮಾಡುತ್ತಿರುವ ತುಮಕೂರು ಮೂಲದ ಡಾ.ಹರ್ಷ ಕುಮಾರ್, D Pharm ವಿದ್ಯಾರ್ಥಿ ಕೇರಳದ ಕೊಚ್ಚಿನ್ ಮೂಲದ ಅಧುನ್ ದೇವ್ ಮತ್ತು ಮಂಗಳೂರು ಕಸಬ ಬೆಂಗ್ರೆ ನಿವಾಸಿ, ಹಣ್ಣುಹಂಪಲು ಮಾರಾಟ ಅಂಗಡಿಯಲ್ಲಿ ಕೆಲಸ ಮಾಡುವ ಮುಹಮ್ಮದ್ ಅಫ್ರಾರ್(23) ಬಂಧಿತ ಆರೋಪಿಗಳು.
ನಗರದ ಪ್ರತಿಷ್ಠಿತ ಎರಡು ವೈದ್ಯಕೀಯ ಕಾಲೇಜಿನ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಭಾಗಿಯಾಗಿರುವ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಜಾಲವೊಂದನ್ನು ಭೇದಿಸಿರುವ ಮಂಗಳೂರು ಪೊಲೀಸರು 2 ವೈದ್ಯಕೀಯ ಕಾಲೇಜಿನ ಇಬ್ಬರು ವೈದ್ಯರು, 7 ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 10 ಮಂದಿಯನ್ನು ಈಗಾಗಲೇ ಬಂಧಿಸಿದ್ದಾರೆ.
ಈ ಪೈಕಿ ನಾಲ್ವರು ಯುವತಿಯರೂ ಸೇರಿದ್ದಾರೆ. ಓರ್ವ ಯು.ಕೆ. ಮೂಲದ ಸಾಗರೋತ್ತರ ಭಾರತೀಯ ಪ್ರಜೆ ಎಂದು ಪೊಲೀಸರು ತಿಳಿಸಿದ್ದಾರೆ.