ತಾಂತ್ರಿಕ ಸಮಸ್ಯೆ-ಅಂಚೆ ಸೇವೆಯಲ್ಲಿ ವ್ಯತ್ಯಯ

ಉಡುಪಿ ಜ.12: ದೇಶಾದ್ಯಂತ ಕಳೆದ ಕೆಲವು ದಿನಗಳಿಂದ ತಾಂತ್ರಿಕ ಸಮಸ್ಯೆಯಿಂದಾಗಿ ಅಂಚೆ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. 

ಸದ್ಯ ಉಂಟಾಗಿರುವ ತಾಂತ್ರಿಕ ಸಮಸ್ಯೆಯಿಂದಾಗಿ ನಗದು ವರ್ಗಾವಣೆ ಸಹಿತ ವೆಬ್‌ಸೈಟ್‌ಗಳ ಪರಿಣಾಮಕಾರಿ ಕರ್ತವ್ಯ ನಿರ್ವಹಣೆಗೆ ಅಡ್ಡಿಯಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಅಂಚೆ ಅಧೀಕ್ಷಕ ನವೀನ್‌ ಚಂದರ್‌ ಅವರು, ಮುಂಬಯಿಯಲ್ಲಿದ್ದ ಸರ್ವರ್‌ ಅನ್ನು ಮೈಸೂರಿಗೆ ಸ್ಥಳಾಂತರ ಮಾಡುತ್ತಿರುವ ಕಾರಣ ಈ ಸಮಸ್ಯೆ ಉಂಟಾಗಿದೆ. ಕೆಲವು ದಿನಗಳೊಳಗೆ ಈ ಪ್ರಕ್ರಿಯೆ ಪೂರ್ಣಗೊಂಡು ಎಂದಿನಂತೆ ಸೇವೆ ಸಿಗಲಿದೆ. ಇದರಿಂದಾಗಿ ಗ್ರಾಹಕರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!