ಬಜರಂಗದಳ ಗೋ ರಕ್ಷಣಾ ಪ್ರಮುಖ್ ರಾಜೇಶ ಪೂಜಾರಿ ಮೃತದೇಹ ಸಂಶಯಾಸ್ಪದ ರೀತಿ ಪತ್ತೆ

ಬಂಟ್ವಾಳ, ಜ.12: ಪಾಣೆಮಂಗಳೂರಿನ ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಬಜರಂಗದಳ ಕಲ್ಲಡ್ಕ ಪ್ರಖಂಡ ಗೋ ರಕ್ಷಣಾ ಪ್ರಮುಖ್ ಬಂಟ್ವಾಳದ ಸಜೀಪ ನಿವಾಸಿ ರಾಜೇಶ್‌ ಪೂಜಾರಿ ಮೃತದೇಹ ಪತ್ತೆಯಾಗಿದೆ.

ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ದ್ವಿಚಕ್ರ ವಾಹನವೊಂದನ್ನು ಕಂಡು ಸಂಶಯಗೊಂಡು ವಾಹನ ಸವಾರರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.

ಆರಂಭದಲ್ಲಿ ನೇತ್ರಾವತಿ ನದಿಗೆ ಯಾರೋ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅಂದಾಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ತಂಡ ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡಿದ್ದು, ಬಳಿಕ ರಾಜೇಶ್ ಪೂಜಾರಿಯ‌ ಮೃತದೇಹ ಪತ್ತೆಯಾಗಿದೆ. ಇದೀಗ ಮೃತದೇಹ ಪತ್ತೆಯಾದ ಬಳಿಕ ಸಾರ್ವಜನಿಕರಲ್ಲಿ ಸಾವಿನ ಬಗ್ಗೆ ಶಂಕೆ ವ್ಯಕ್ತವಾಗಿದ್ದು ಊಹಾಪೋಹಗಳು ಹರಿದಾಡುತ್ತಿದೆ.

ಈ ನಡುವೆ ರಾಜೇಶ್ ಅವರು ಸಜೀಪ ಮನೆಯಿಂದ ಬರುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ವೇಳೆ ಹಳೆಯ ಪಾಣೆಮಂಗಳೂರು ಸೇತುವೆಯಲ್ಲಿ ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗಿ ನೇತ್ರಾವತಿ ನದಿಗೆ ಬಿದ್ದು ಸಾವನ್ನಪ್ಪಿರಬಹುದಾ? ಎಂಬ ಸಂದೇಹ ವ್ಯಕ್ತವಾಗಿದೆ.

ದ್ವಿಚಕ್ರ ವಾಹನ ಅಪಘಾತವಾದ ಬಗ್ಗೆ ಸಂಶಯಗಳು ವ್ಯಕ್ತವಾಗಿದ್ದು, ಪೋಲಿಸರು ತನಿಖೆ ಆರಂಭಿಸಿದ್ದಾರೆ. ಇದರ ಜೊತೆಗೆ ಸಾವಿಗೆ ಇನ್ನಾವುದೋ ಕಾರಣವಿರ ಬಹುದಾ? ಎಂಬ ಬಗ್ಗೆಯೂ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!