ಶಿಕ್ಷಣ ನೀತಿ ಯಶಸ್ವಿ ಜಾರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕು: ರಾಷ್ಟ್ರಪತಿ ಕೋವಿಂದ್

ನವದೆಹಲಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಯಶಸ್ವಿ ಜಾರಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪರಿಣಾಮಕಾರಿ ಕೊಡುಗೆಯನ್ನು ಅವಲಂಬಿಸಿದೆ. ಭಾರತದ ಸಂವಿಧಾನದೊಳಗೆ ಶಿಕ್ಷಣ ಒಂದು ಪ್ರಬಲವಾದ ಅಸ್ತ್ರವಾಗಿದೆ. ಹೀಗಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಒಟ್ಟಾಗಿ ಇವುಗಳನ್ನು ಯಶಸ್ವಿಯಾಗಿ ಜಾರಿಗೆ ತರಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರೆ ನೀಡಿದ್ದಾರೆ.

ಅವರು ಇಂದು ವರ್ಚುವಲ್ ಕಾನ್ಫರೆನ್ಸ್ ಮೂಲಕ ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು ಉದ್ದೇಶಿಸಿ ಮಾತನಾಡಿದರು. ಎಲ್ಲಾ ಕ್ಷೇತ್ರಗಳಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ರಾಷ್ಟ್ರೀಯ ಸಂಶೋಧನಾ ಫೌಂಡೇಶನ್ ನ್ನು ಸ್ಥಾಪಿಸಲಾಗುವುದು. ಸಂಶೋಧನೆಯ ಸಂಸ್ಕೃತಿಯನ್ನು ಹೆಚ್ಚಿಸಲು ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳು ರಾಷ್ಟ್ರೀಯ ಸಂಶೋಧನಾ ಕೇಂದ್ರದ ಮೂಲಕ ಕೆಲಸ ಮಾಡಬೇಕು ಎಂದರು.

ನೂತನ ಶಿಕ್ಷಣ ನೀತಿಯಲ್ಲಿ ಭಾರತದ ಭಾಷೆಗಳು, ಕಲೆ, ಸಂಸ್ಕೃತಿಗೆ ಆದ್ಯತೆ ನೀಡಲಾಗಿದೆ. ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಭಾರತದ ಭಾಷೆಗಳು ಮತ್ತು ಸಮಗ್ರತೆ, ಐಕ್ಯತೆಯನ್ನು ಬಲಪಡಿಸುತ್ತದೆ. ತಂತ್ರಜ್ಞಾನಗಳ ಸಮಗ್ರತೆಯನ್ನು ಬಳಸುವ ಮೂಲಕ ಕಲಿಕೆಯ ಪ್ರಕ್ರಿಯೆ ಉತ್ತಮವಾಗಿ ವಿದ್ಯಾರ್ಥಿಗಳ ಭವಿಷ್ಯ ಪ್ರಜ್ವಲವಾಗುತ್ತದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ತಂತ್ರಜ್ಞಾನ ವೇದಿಕೆಯನ್ನು ಸ್ಥಾಪಿಸಲಾಗುವುದು ಎಂದರು.

Leave a Reply

Your email address will not be published. Required fields are marked *

error: Content is protected !!