“ಪ್ರಜಾಧ್ವನಿ ಬಸ್ ಯಾತ್ರೆ”- ಜ.14 ರಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಪೂರ್ವಭಾವಿ ಸಭೆ

ಉಡುಪಿ: ಜ. 22 ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ರಾಷ್ಟ್ರ ಮತ್ತು ರಾಜ್ಯಮಟ್ಟದ ನಾಯಕರ ಉಪಸ್ಥಿತಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯದ ವಿರುದ್ಧ ಉಡುಪಿಯ ಕ್ರಿಶ್ಚಿಯನ್ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ “ಪ್ರಜಾಧ್ವನಿ ಯಾತ್ರೆ” ಬೃಹತ್ ಸಮಾವೇಶವು ನಡೆಯಲಿದೆ.

ಈ ಬೃಹತ್ ಸಮಾವೇಶದ ರೂಪುರೇಷೆಯ ಬಗ್ಗೆ ಮಾಹಿತಿ ನೀಡಲು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಪೂರ್ವಭಾವಿ ಸಭೆಯನ್ನು ಜ.14 ಶನಿವಾರದಂದು ಸಂಜೆ 03.00 ಗಂಟೆಗೆ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಕರೆಯಲಾಗಿದೆ.

ಈ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ವಿಧಾನಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಉಡುಪಿ ಜಿಲ್ಲಾ ಉಸ್ತುವಾರಿಗಳು, ಮಾಜಿ ಸಚಿವರಾದ ಅಭಯಚಂದ್ರ ಜೈನ್, ವಿಧಾನ ಪರಿಷತ್ ಮಾಜಿ ಸಭಾಪತಿಗಳಾದ ಪ್ರತಾಪಚಂದ್ರ ಶೆಟ್ಟಿ, ಉಡುಪಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಮಿಥುನ್ ರೈ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ ಎ ಗಫೂರ್, ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಅರ್ಜಿ ಸಲ್ಲಿಸಿದ ಆಕಾಂಕ್ಷಿಗಳು ಹಾಗೂ ಪಕ್ಷದ ಎಲ್ಲಾ ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಈ ಸಭೆಯಲ್ಲಿ ಭಾಗವಹಿಸುತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯ ತಿಳಿಸಿ ಸಲಹೆ ಸೂಚನೆಗಳನ್ನು ನೀಡಬೇಕೆಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!