ಕುಟುಂಬದ ಓರ್ವ ಗೃಹಿಣಿಗೆ ಪ್ರತಿ ತಿಂಗಳು ರೂ. 2,000: ‘ಗೃಹಲಕ್ಷ್ಮಿ’ಯೋಜನೆಯ ಕಾಂಗ್ರೆಸ್ ಭರವಸೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಈಗಾಗಲೇ ಬಹುತೇಕ ಪ್ರಚಾರ ಕಾರ್ಯ ಆರಂಭಿಸಿದ್ದು, ಜನರನ್ನು ಸೆಳೆಯಲು ವಿವಿಧ ಯೋಜನೆಗಳನ್ನು ಪ್ರಕಟಿಸಲಾಗುತ್ತಿದೆ. 

ಪ್ರತಿ ಕುಟುಂಬದ ಓರ್ವ ಗೃಹಿಣಿಗೆ ಪ್ರತಿ ತಿಂಗಳು 2,000ರೂ. ಸಹಾಯಧನ ನೀಡುವ ‘ಗೃಹಲಕ್ಷ್ಮಿ’ ಯೋಜನೆಯನ್ನು ಕಾಂಗ್ರೆಸ್ ಇಂದು ಪ್ರಕಟಿಸಿದೆ. ನಗರದ ಅರಮನೆ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ‘ನಾ ನಾಯಕಿ’ ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಈ ಯೋಜನೆಗೆ ಸಂಬಂಧಿಸಿದ ಭಿತ್ತಿ ಪತ್ರ ಅನಾವರಣ ಮೂಲಕ ಅಧಿಕೃತವಾಗಿ ಯೋಜನೆಯನ್ನು ಘೋಷಿಸಿದರು. 

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೇರಿದರೆ ರಾಜ್ಯದ ಪ್ರತಿ ಕುಟುಂಬದ ಯಜಮಾನಿಗೆ ತಿಂಗಳಿಗೆ ರೂ. 2,000 ನೀಡಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. 

Leave a Reply

Your email address will not be published. Required fields are marked *

error: Content is protected !!