ಜೂನ್ 2024 ವರೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಜೆಪಿ ನಡ್ಡಾ ಮುಂದುವರಿಕೆ

ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಜೆಪಿ ನಡ್ಡಾ 2024 ರ ಜೂನ್ ವರೆಗೆ ಮುಂದುವರೆಯಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಅಮಿತ್ ಶಾ ಘೋಷಿಸಿದ್ದಾರೆ. 

ದೆಹಲಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಅಮಿತ್ ಶಾ ಈ ಘೋಷಣೆ ಮಾಡಿದ್ದು, ನಿರೀಕ್ಷೆಯಂತೆಯೇ ನಡ್ಡಾ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ. 2024 ರಲ್ಲಿ ಲೋಕಸಭಾ ಚುನಾವಣೆಯನ್ನು ನಡ್ಡಾ ಅವರ ನೇತೃತ್ವದಲ್ಲಿಯೇ ಮುಂದುವರೆಸುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ.  9 ರಾಜ್ಯಗಳ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ನಡ್ಡಾ ಅವರೇ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯುವ ಸಾಧ್ಯತೆಗಳಿವೆ ಎಂದು ವಿಶ್ಲೇಷಿಸಲಾಗಿತ್ತು.

ನಡ್ಡಾ ಅವರನ್ನು ಮುಂದುವರೆಸಲು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ ಅವರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಾವು 2019ಕ್ಕಿಂತಲೂ ಹೆಚ್ಚಿನ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ” ಎಂದು ಅಮಿತ್ ಶಾ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ. 

Leave a Reply

Your email address will not be published. Required fields are marked *

error: Content is protected !!