ಮಂಗಳೂರು: ಪತ್ನಿಯನ್ನು ಹತ್ಯೆಗೈದು ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಮಂಗಳೂರು: ನಗರದ ಬಿಜೈನ ಅಪಾರ್ಟ್‌ಮೆಂಟ್ ವೊಂದರಲ್ಲಿ ಪತ್ನಿಯನ್ನು ಹತ್ಯೆಗೈದು ಪತಿ ನೇಣಿಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ.

ಬಿಜೈ ನಿವಾಸಿಗಳಾದ ದಿನೇಶ್ (65) ಹಾಗೂ ಶೈಲಜಾ (64) ಮೃತಪಟ್ಟ ದಂಪತಿಗಳು ಎಂದು ತಿಳಿದು ಬಂದಿದೆ.

ಶೈಲಜಾ ಅನಾರೋಗ್ಯ ಹಿನ್ನೆಲೆಯಲ್ಲಿ ಹಾಸಿಗೆ ಹಿಡಿದಿದ್ದು, ಇವರನ್ನು ನೋಡಿಕೊಳ್ಳಲು ಹೋಮ್ ನರ್ಸ್ ಬಂದು ಹೋಗುತ್ತಿದ್ದರು ಎಂದು ತಿಳಿದುಬಂದಿದೆ.

ಹೆಂಡತಿ ಮೃತಪಟ್ಟಿರುವ ಪಕ್ಕದ ಕೋಣೆಯಲ್ಲೇ ಗಂಡ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!