ಫೆ.1ರಂದು ಉಚ್ಚಿಲದಲ್ಲಿ ಸಹಕಾರಿ ರತ್ನ ಯಶ್ಪಾಲ್ ಸುವರ್ಣ ಅವರಿಗೆ ಸಾರ್ವಜನಿಕ ಅಭಿನಂದನೆ

ಉಚ್ಚಿಲ: ಸಹಕಾರ ರತ್ನ ಯಶ್‌ಪಾಲ್ ಎ. ಸುವರ್ಣ ಅಭಿನಂದನಾ ಸಮಿತಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ನಿ. ಮಂಗಳೂರು ವತಿಯಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸಹಕಾರಿ ಸಂಘಗಳ ಸಹಯೋಗದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಯಶ್‌ಪಾಲ್ ಎ. ಸುವರ್ಣ ಅವರಿಗೆ ಫೆ. 1ರಂದು ಅಪರಾಹ್ನ 3ಗಂಟೆಗೆ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದ ಶಾಲಿನಿ ಡಾ| ಜಿ. ಶಂಕರ್ ತೆರೆದ ಸಭಾಂಗಣದಲ್ಲಿ ಸಾರ್ವಜನಿಕ ಅಭಿನಂದನಾ ಸಮಾರಂಭ ಯಶೋಭಿನಂದನ ಕಾರ್ಯಕ್ರಮ ನಡೆಯಲಿದೆ.

ಆನೆಗುಂದಿ ಮಹಾಸಂಸ್ಥಾನ ಮಠದ ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಡಾ| ಜಿ. ಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಲಿರುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನಿಕಟಪೂರ್ವಾಧ್ಯಕ್ಷ ದಯಾನಂದ ಕತ್ತಲ್‌ಸಾರ್ ಅಭಿನಂದನಾ ನುಡಿಗೈಯಲಿರುವರು.

ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿ. ಸುನಿಲ್ ಕುಮಾರ್, ಎಸ್. ಅಂಗಾರ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಉಡುಪಿ ಜಿಲ್ಲೆಯ ಶಾಸಕರಾದ ಲಾಲಾಜಿ ಆರ್. ಮೆಂಡನ್, ಕೆ. ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿ. ಎಂ. ಸುಕುಮಾರ್ ಶೆಟ್ಟಿ, ಮಂಗಳೂರು ಜಿಲ್ಲೆಯ ಶಾಸಕರಾದ ಉಮಾನಾಥ ಕೋಟ್ಯಾನ್, ವೈ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಉಚ್ಚಿಲ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ, ದಿ. ಮೈಸೂರು ಎಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ಅಧ್ಯಕ್ಷರಾದ ಉದಯ ಕುಮಾರ್ ಶಟ್ಟಿ ಕಿದಿಯೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕಾಪು ಗುರ್ಮೆ ಫೌಂಡೇಶನ್‌ ನ ಅಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ

ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ, ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ, ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕ ದೇವಿ ಪ್ರಸಾದ್ ಶೆಟ್ಟಿ ಬೆಳಪು, ಉದ್ಯಮಿಗಳಾದ ಮನೋಹರ್ ಎಸ್. ಶೆಟ್ಟಿ, ಜೆರ‍್ರಿ ವಿನ್ಸೆಂಟ್ ಡಯಾಸ್, ಆನಂದ ಪಿ.ಸುವರ್ಣ, ಹರಿಯಪ್ಪ ಕೋಟ್ಯಾನ್, ಸಾಧು ಸಾಲ್ಯಾನ್, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಬಿ. ಎನ್. ಶಂಕರ ಪೂಜಾರಿ, ದೇವಾಡಿಗರ ಸಂಘದ ಅಧ್ಯಕ್ಷ ಗಣೇಶ್ ದೇವಾಡಿಗ ಬ್ರಹ್ಮಗಿರಿ, ಕಾಪು ಹಳೆಮಾರಿಯಮ್ಮ ದೇಗುಲದ ಆಡಳಿತ ಮೊಕ್ತೇಸರ ಪ್ರಸಾದ್ ಶೆಣೈ ಕಾಪು, ಕುಂಬಾರ ಮಹಾಸಂಘದ ರಾಜ್ಯಕಾರ್ಯಾಧ್ಯಕ್ಷ ಡಾ| ಅಣ್ಣಯ್ಯ ಕುಲಾಲ್ ಉಳ್ತೂರು, ಕಚ್ಚೂರು ದೇಗುಲದ  ಆಡಳಿತ ಮೊಕ್ತೇಸರ ಕಡಂದಲೆ ಸುರೇಶ್ ಭಂಡಾರಿ,ಮಾಲ್ದಿದೇವಿ ದೇಗುಲದ ಆಡಳಿತ ಮೊಕ್ತೇಸರ ಗೋಕುಲ್‌ದಾಸ್ ಕಚ್ಚೂರು, ಜಿಲ್ಲಾ ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ಉಮೇಶ್ ಎ. ನಾಯ್ಕ್ ಚೇರ್ಕಾಡಿ, ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್ ಅಲೆವೂರು, ಕೆಎಫ್‌ಡಿಸಿ ನಿಕಟಪೂರ್ವಾಧ್ಯಕ್ಷ ನಿತಿನ್ ಕುಮಾರ್, ಉಚ್ಚಿಲ ಮಹಾಲಕ್ಷ್ಮೀ ದೇಗುಲದ ಅರ್ಚಕ ರಾಘವೇಂದ್ರ ಉಪಾಧ್ಯಾಯ, ಉರ್ವ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ದೇವಾನಂದ ಗುರಿಕಾರ, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷ ಶೀಲಾ ಕೆ. ಶೆಟ್ಟಿ ಉಪಸ್ಥಿತರಿರುವರು.

10 ಸಾವಿರ ಮಂದಿ ನಿರೀಕ್ಷೆ: ಉಭಯ ಜಿಲ್ಲೆಯ 75 ಮೀನುಗಾರಿಕ ಸಹಕಾರಿ ಸಂಘಗಳು, ಸಹಕಾರಿ ಸಂಸ್ಥೆಗಳು, ಭಜನಾ ಮಂದಿರಗಳು, ವಿವಿಧ ಸಂಘ ಸಂಸ್ಥೆಗಳು ಸಹಕಾರದಲ್ಲಿ ಕಾರ್ಯಕ್ರಮ ನಡೆಯಲಿದ್ದು ಸುಮಾರು 10 ಸಾವಿರಕ್ಕೂ ಅಽಕ ಮಂದಿ ಈ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಯಶ್‌ಪಾಲ್ ಅಭಿನಂದನಾ ಸಮಿತಿಯ ಆಧ್ಯಕ್ಷ ಆನಂದ ಸಿ. ಕುಂದರ್, ಸಂಚಾಲಕ ಮಂಜುನಾಥ ಎಸ್. ಕೆ., ಪ್ರಧಾನ ಕಾರ್ಯದರ್ಶಿ ಕುತ್ಯಾರು ಪ್ರಸಾದ್ ಶೆಟ್ಟಿ, ಸಹ ಸಂಚಾಲಕ ರಾಮಚಂದ್ರ ಕುಂದರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!