ಭಾರತೀಯ ಮಾಧ್ಯಮ ಜಾಗತಿಕ ಮಟ್ಟಕ್ಕೇರಬೇಕು: ಪ್ರಧಾನಿ ಮೋದಿ

ನವದೆಹಲಿ: ಭಾರತೀಯ ಮಾಧ್ಯಮಗಳು ಜಾಗತಿಕ ಮಟ್ಟಕ್ಕೆ ಹೋಗಬೇಕಾದ ಅಗತ್ಯತೆ ಇದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಜೈಪುರದ ಪ್ರವಾಸಿ ಆಕರ್ಷಣೆಯಾದ ಪತ್ರಿಕಾ ಗೇಟ್ ಅನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದ ಪ್ರಧಾನಿ, ‘ಇಂದು ದೇಶದ ಸ್ಥಳೀಯ ಉತ್ಪನ್ನಗಳು ಜಾಗತಿಕ ಮಟ್ಟದಲ್ಲಿ ಸಾಗುತ್ತಿವೆ, ಭಾರತದ ಧ್ವನಿ ಕೂಡ ಜಾಗತಿಕವಾಗಿ ಹೆಚ್ಚುತ್ತಿದೆ. ಇಂದು ದೇಶವು ವಿಶ್ವ ಮಟ್ಟದಲ್ಲಿ ಬಲವಾದ ಉಪಸ್ಥಿತಿಯನ್ನು  ಹೊಂದಿದೆ ಎಂದು ಸಂತಸ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾರತೀಯ ಮಾಧ್ಯಮಗಳು ಜಾಗತಿಕ ಮಟ್ಟಕ್ಕೆ ಹೋಗಬೇಕಾದ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

‘ಇಂದು, ಭಾರತವು ಪ್ರತಿಯೊಂದು ಜಾಗತಿಕ ಹಂತದಲ್ಲೂ ಬಲವಾದ ಅಸ್ತಿತ್ವವನ್ನು ಹೊಂದಿದೆ. ಅಂತಹ ಸಮಯದಲ್ಲಿ, ಭಾರತೀಯ ಮಾಧ್ಯಮಗಳು ಜಾಗತಿಕ ಮಟ್ಟಕ್ಕೆ ಹೋಗಬೇಕಾಗಿದೆ. ನಮ್ಮ ಪತ್ರಿಕೆಗಳು ಮತ್ತು ನಿಯತಕಾಲಿಕೆಗಳು ಜಾಗತಿಕ ಖ್ಯಾತಿಯನ್ನು ಹೊಂದಿರಬೇಕು. ಈ ಡಿಜಿಟಲ್ ಯುಗದಲ್ಲಿ, ನಾವು  ಪ್ರಪಂಚದಾದ್ಯಂತ ಡಿಜಿಟಲ್ ತಲುಪಬೇಕು. ಅಲ್ಲದೆ ಭಾರತೀಯ ಸಂಸ್ಥೆಗಳು ವಿಶ್ವದ ವಿವಿಧ ಭಾಗಗಳಲ್ಲಿ ನೀಡುತ್ತಿರುವ ರೀತಿಯಲ್ಲಿ ಸಾಹಿತ್ಯ ಪ್ರಶಸ್ತಿಗಳನ್ನು ಸಹ ನೀಡಬೇಕು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಪ್ರಧಾನಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪತ್ರಿಕಾ ಸಮೂಹದ ಅಧ್ಯಕ್ಷ ಗುಲಾಬ್ ಕೊಠಾರಿ ಬರೆದಿರುವ ‘ಸಂವಾದ್ ಉಪನಿಷತ್’ ಮತ್ತು ‘ಅಕ್ಷರ ಯಾತ್ರೆ’ ಎಂಬ ಎರಡು ಪುಸ್ತಕಗಳನ್ನು ಬಿಡುಗಡೆ ಮಾಡಿದರು.

ಹೊಸ ತಲೆಮಾರಿನವರಲ್ಲಿ ಪುಸ್ತಕಗಳನ್ನು ಓದುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕೆಂದು ಕರೆಯಿತ್ತ ಮೋದಿ, “ಇಂದು, ಪಠ್ಯ ಮತ್ತು ಟ್ವೀಟ್ ನ ಈ ಯುಗದಲ್ಲಿ, ನಮ್ಮ ಹೊಸ ಪೀಳಿಗೆಯವರು ಗಂಭೀರವಾದ ಜ್ಞಾನವನ್ನು ಅಳವಡಿಸಿಕೊಳ್ಳುವುದರಿಂದ ದೂರ ಸರಿಯದಿರುವುದು ಮುಖ್ಯ” ಎಂದು ಪ್ರಧಾನಿ ಹೇಳಿದರು.

ಸರ್ಕಾರದ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮಾಧ್ಯಮಗಳ ಕೊಡುಗೆಯನ್ನು ಶ್ಲಾಘಿಸಿದ ಪ್ರಧಾನಿ, ಕೊರೋನಾ ವಿರುದ್ಧದ ಜಾಗೃತಿ ಅಭಿಯಾನದಲ್ಲಿ ಭಾರತೀಯ ಮಾಧ್ಯಮಗಳು ಮಹತ್ವದ ಪಾತ್ರ ವಹಿಸಿವೆ. ನಮ್ಮ ಮಾಧ್ಯಮಗಳು ಸರ್ಕಾರದ ಕ್ರಮಗಳನ್ನು ವಿವರಿಸುವ  ಮತ್ತು ಸರ್ಕಾರದ ಯೋಜನೆಗಳಲ್ಲಿನ ನ್ಯೂನತೆಗಳನ್ನು ಟೀಕಿಸುವ ಉತ್ತಮ ಕೆಲಸವನ್ನು ಮಾಡುತ್ತಿವೆ” ಎಂದರು.

Leave a Reply

Your email address will not be published. Required fields are marked *

error: Content is protected !!