ಫೆ.4ರಂದು ಬ್ರಹ್ಮಾವರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಶೈಕ್ಷಣಿಕ ಸಮ್ಮೇಳನ

ಉಡುಪಿ ಫೆ.2 (ಉಡುಪಿ ಟೈಮ್ಸ್ ವರದಿ): ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು ಇದರ ಬ್ರಹ್ಮಾವರ ತಾಲೂಕು ಶಾಖೆಯ ಆಶ್ರಯದಲ್ಲಿ ಬ್ರಹ್ಮಾವರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಶೈಕ್ಷಣಿಕ ಸಮ್ಮೇಳನ ಹಾಗೂ ಶಿಕ್ಷಕರ ಬಂಧುಗಳ ಕುಟುಂಬ ಸಮ್ಮಿಲನ ಕಾರ್ಯಕ್ರಮ ಇದೇ ಫೆ. 4ರಂದು ಸಂಜೆ 5ಗಂಟೆಗೆ ಹೆರಂಜೆಯ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಆವರಣದಲ್ಲಿ ನಡೆಯಲಿದೆ ಎಂದು ಸಂಘದ ಬ್ರಹ್ಮಾವರ ತಾಲೂಕು ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಹಾವಂಜೆ ತಿಳಿಸಿದರು.

ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ‌ ಶ್ರೀನಿವಾಸ ಪೂಜಾರಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ ಎಂದರು. 

ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ರಾಮಚಂದ್ರ ವಾಕುಡ, ವಲಯ ಉಪಾಧ್ಯಕ್ಷ ರಘುರಾಮ ನಾಯ್ಕ್, ಜಿಲ್ಲಾ ಕೋಶಾಧಿಕಾರಿ ರವಿ ಎಸ್. ಪೂಜಾರಿ ಬೈಕಾಡಿ, ಮಹೇಶ್ ಗಿಳಿಯಾರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!