10 ಬೃಹತ್ ಹಗರಣ- ಸಿದ್ದರಾಮಯ್ಯ ಸಹಿತ ಕಾಂಗ್ರೆಸ್ ನಾಯಕರ ವಿರುದ್ಧ ಲೋಕಾಯುಕ್ತಕ್ಕೆ ದೂರು
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಬಟ್ ವಾದ್ರಾ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಹಾಗೂ ಹಲವಾರು ಅಧಿಕಾರಿಗಳ ವಿರುದ್ಧ ವಿರುದ್ಧ ಲೋಕಾಯುಕ್ತಕ್ಕೆ 3728 ಪುಟಗಳ ದಾಖಲೆ ಸಮೇತ ದೂರುಗಳ ಸರಮಾಲೆಯನ್ನೇ ಸಲ್ಲಿಸಲಾಗಿದೆ.
ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಅವರು, ಕಾಂಗ್ರೆಸ್ ಮುಖಂಡರ 10 ಬೃಹತ್ ಹಗರಣಗಳಿಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಬರ್ಟ್ ವಾದ್ರಾ, ಮಾಜಿ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣ ಭೈರೇಗೌಡ, ಯು. ಟಿ. ಖಾದರ್, ಎಂ.ಬಿ. ಪಾಟೀಲ್, ಜಮೀರ್ ಅಹಮದ್, ದಿನೇಶ್ ಗುಂಡೂರಾವ್. ಎಂ.ಕೃಷ್ಣಪ್ಪ, ಎನ್,ಎ.ಹ್ಯಾರೀಸ್ ಹಾಗೂ ಪ್ರಿಯಾ ಕೃಷ್ಣ ವಿರುದ್ಧ 10 ದೂರುಗಳನ್ನು ದಾಖಲಿಸಿದ್ದಾರೆ. ಮಾತ್ರವಲ್ಲದೆ 9 ಹಿರಿಯ ಐಎಎಸ್ ಅಧಿಕಾರಿಗಳು, ಐದು ಕೆಎಎಸ್ ಅಧಿಕಾರಿಗಳು ಸೇರಿದಂತೆ 21 ಮಂದಿ ಅಧಿಕಾರಿಗಳ ವಿರುದ್ಧವೂ ಅವರು ದೂರು ದಾಖಲಿಸಿದ್ದಾರೆ. ರಾಜ್ಯದ ರಾಜಕೀಯ ಇತಿಹಾಸದಲ್ಲಿಯೇ ಪ್ರಪ್ರಥಮವಾಗಿ 10 ವಿವಿಧ ಬೃಹತ್ ಹಗರಣಗಳಿಗೆ ಸಂಬಂಧಿಸಿದಂತೆ, ಪ್ರತ್ಯೇಕವಾದ 10 ದೂರುಗಳನ್ನು ಒಂದೇ ಬಾರಿಗೆ ಲೋಕಾಯುಕ್ತದಲ್ಲಿ ದಾಖಲಿಸಲಾಗಿದೆ ಎಂದು ಎನ್.ಆರ್.ರಮೇಶ್ ಹೇಳಿದ್ದಾರೆ.
Interested in having iuptodate info on state/national issues.