ಕಾಂಗ್ರೆಸ್‌ನ ಪ್ರಣಾಳಿಕೆ ಸಮಿತಿಗೆ ರಾಜೀನಾಮೆಗೆ ಮುಂದಾದ ಜಿ.ಪರಮೇಶ್ವರ್!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೊಮ್ಮೆ ಅಸಮಾಧಾನ ಸ್ಫೋಟಗೊಂಡಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪ್ರಣಾಳಿಕೆ ಕಮಿಟಿಯಲ್ಲಿ ಚರ್ಚಿಸದೇ, ಭರವಸೆಗಳನ್ನು ವೇದಿಕೆಯಲ್ಲಿ ಘೋಷಣೆ ಮಾಡುತ್ತಿದ್ದಾರೆ. ನಾಮಕವಾಸ್ತೆ ಪ್ರಣಾಳಿಕೆ ಸಮಿತಿಯಲ್ಲಿ ಇರುವುದಿಲ್ಲ ಎಂದು ಜಿ ಪರಮೇಶ್ವರ್ ರಾಜೀನಾಮೆ ಪತ್ರ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಹಲವು ಬಾರಿ ಅಸಮಾಧಾನ ತೋಡಿಕೊಂಡರು ನಾಯಕರಿಂದ ಯಾವುದೇ ಪ್ರತಿಕ್ರಿಯೆ ಬಂದಿರಲ್ಲ. ಹೀಗಾಗಿ ಪರಮೇಶ್ವರ್ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಪ್ರಣಾಳಿಕೆ ಘೋಷಣೆ ಸಂದರ್ಭದಲ್ಲಿ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂಬುದು ಪರಮೇಶ್ವರ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಬಗ್ಗೆ ತಮ್ಮ ಆಪ್ತರ ಬಳಿಯೂ ಬೇಸರ ಹೊರ ಹಾಕಿದ್ದಾರೆ ಎಂಬುದು ಮಾಹಿತಿ. 8 ವರ್ಷ ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ.‌ ಅಷ್ಟೇ ಏಕೆ, ಡಿಸಿಎಂ, ಪ್ರಬಲ ಖಾತೆಗಳನ್ನೂ ನಿಭಾಯಿಸಿದ್ದೇನೆ. ಪಕ್ಷ ಸಂಘಟನೆಯಲ್ಲಿ ನನ್ನದೆ ಆದ ಕೊಡುಗೆ ಇದೆ. ಪ್ರಸ್ತುತ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಸಹ ಆಗಿದ್ದೇನೆ. ಆದರೂ ತನ್ನನ್ನ ಕಡೆಗಣಿಸಿ ಉಚಿತ ಯೋಜನೆಗಳ ಘೋಷಣೆ ಮಾಡುತ್ತಿದ್ದಾರೆಂದು ಬೇಸರ ತೋಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪಕ್ಷದ ಕೆಲವು ನಿರ್ಧಾರಗಳನ್ನು ಕೈಗೊಳ್ಳುವ ಸಂದರ್ಭದಲ್ಲಿ ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂಬುದು ಪರಮೇಶ್ವರ್ ಅಸಮಾಧಾನಕ್ಕೆ ಕಾರಣವಂತೆ. ಈ ನಡುವೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!