ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಮನವಿ

ಪತ್ರಿಕಾ ಪ್ರಕಟಣೆ:
ಬೆಳ್ತಂಗಡಿ: ಸರಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರ ನಿಯೋಗವು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ ಅವರನ್ನು ಭೇಟಿಯಾಗಿ ತಮ್ಮ ಸಮಸ್ಯೆಗಳು ಹಾಗೂ ಬೇಡಿಕೆಗಳ ಕುರಿತು ಮನವಿಯನ್ನು ಸಲ್ಲಿಸಲಾಯಿತು.

ಕೊರೋನಾ ಎಂಬ ಸಾಂಕ್ರಾಮಿಕ ರೋಗದಿಂದಾಗಿ ಇಡೀ ಶೈಕ್ಷಣಿಕ ಚಟುವಟಿಕೆ ಸ್ತಬ್ಧವಾಗಿದೆ ಕರ್ನಾಟಕ ರಾಜ್ಯದಲ್ಲಿ ಸರಿಸುಮಾರು 3000 ಮಂದಿ ಅತಿಥಿ ಉಪನ್ಯಾಸಕರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಾ ಇದ್ದು, (ಮಾರ್ಚ್ ತಿಂಗಳಿನಿಂದ) ಕಳೆದ ಆರು ತಿಂಗಳಿನಿಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಸರ್ಕಾರದಿಂದ ಒಂದೇ ಒಂದು ರೂಪಾಯಿ ವೇತನ ಇಲ್ಲ, ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಸಮಾಜದಲ್ಲಿ ದುಡಿದು ತಿನ್ನುವ ಪ್ರತಿಯೋರ್ವ ಶ್ರಮಿಕ ವರ್ಗದವರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ನೀಡಿ ಆತ್ಮಸೈರ್ಯ ತುಂಬಿದೆ.


ಇವುಗಳಿಂದ ವಂಚಿತರಾದವರು ಯಾರೆಂದರೆ ಸರಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರು .ಇಂದು ಅತಿಥಿ ಉಪನ್ಯಾಸಕರು ಬೀದಿ – ಬೀದಿಗಳಲ್ಲಿ ಹಣ್ಣು -ಹಂಪಲು ,ತರಕಾರಿ ವ್ಯಾಪಾರ ಮಾಡುತ್ತಾ ಇದ್ದು , ವಯಸ್ಸಾದ ತಂದ – ತಾಯಿಯ ಅನಾರೋಗ್ಯ ನೋಡಿಕೊಳ್ಳದ ಸ್ಥಿತಿಗೆ ತಲುಪಿದ್ದಾರೆ , ಮಾತ್ರವಲ್ಲದೆ ಮಾನಸಿಕ ಖಿನ್ನತೆಗೆ ಒಳಗಾಗಿ ಹಲವು ಮಂದಿ ಅತಿಥಿ ಉಪನ್ಯಾಸಕರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮುಂದೆ ಖಾಯಂ ಉಪನ್ಯಾಸಕರ ನೇಮಕಾತಿ ಆಗುವಂತಹ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರಿಗೆ ಪ್ರಾತಿನಿಧ್ಯ ನೀಡಬೇಕು. ಯಾವುದೇ ಕಾರಣಕ್ಕೂ ಅತಿಥಿ ಉಪನ್ಯಾಸಕರನ್ನು ಹುದ್ದೆಯಿಂದ ತೆಗೆದುಹಾಕಬಾರದು.

ಕೊರೊನಾ ಅವಧಿಯಲ್ಲಿ ಖಾಯಂ ಉಪನ್ಯಾಸಕರಿಗೆ ಪ್ರತಿ ತಿಂಗಳು ಸರ್ಕಾರದಿಂದ ವೇತನ ನೀಡಿದಂತೆ ಅದೇ ರೀತಿಯಲ್ಲಿ ಕೊರೋನಾ ರಜೆ ಹಿನ್ನೆಲೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಾಗಿ ಯಾರೆಲ್ಲ ಕಾರ್ಯನಿರ್ವಹಿಸುತ್ತಾ ಇದ್ದಾರೆ ಅವರೆಲ್ಲರಿಗೂ ಕೊರೋನಾ ರಜೆ ಅವಧಿಯನ್ನು ಕರ್ತವ್ಯದ ಅವಧಿಯೆಂದು ಪರಿಗಣಿಸಿ ವೇತನವನ್ನು ನೀಡಬೇಕು, ಕಡೆಯ ಪಕ್ಷ ವೇತನ ನೀಡಲು ಸಾಧ್ಯವಿಲ್ಲದಿದ್ದರೆ ಸಮಾಜದ ಪ್ರತಿಯೋರ್ವ ಶ್ರಮಿಕರಿಗೆ ಕೊರೊನಾ ವಿಶೇಷ ಆರ್ಥಿಕ ಪ್ಯಾಕೇಜ್ ನೀಡಿದ್ದಂತೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಕಾರೋನಾ ವಿಶೇಷ ಆರ್ಥಿಕ ಪ್ಯಾಕೇಜ್ ನ್ನು ಸರಕಾರ ನೀಡಬೇಕೆಂದು ಮನವಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಸರಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರ ಪ್ರಮುಖರಾದ ಪದ್ಮಪ್ರಭ ಇಂದ್ರ, ಅತಿಥಿ ಉಪನ್ಯಾಸಕರಾದ ದಿನೇಶ್, ಸಂದೀಪ್, ಸಕಿತಾ, ತುಳಸಿ, ಇನ್ನಿತರ ಬೆಳ್ತಂಗಡಿ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರು ಇದ್ದರು.

Leave a Reply

Your email address will not be published. Required fields are marked *

error: Content is protected !!