ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

ಇಸ್ಲಾಮಾಬಾದ್‌: ಪಾಕಿಸ್ತಾನದ ಮಾಜಿ ಅಧ್ಯಕ್ಷ, ನಿವೃತ್ತ ಸೇನಾ ಜನರಲ್ ಪರ್ವೇಜ್ ಮುಷರಫ್ (79) ಅವರು ದೀರ್ಘಕಾಲದ ಅನಾರೋಗ್ಯದಲ್ಲಿದ್ದವರು ಇಂದು ನಿಧನರಾಗಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ದುಬೈನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಎಂದು ವರದಿಯಲ್ಲಿ ತಿಳಿಸಿದ್ದಾರೆ. 

ಅವರು ಅಮಿಲಾಯ್ಡೋಸಿಸ್‌ ಎಂಬ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಈ ಹಿಂದೆ ಅವರ ಕುಟುಂಬ ತಿಳಿಸಿತ್ತು. 

ಅಮಿಲಾಯ್ಡ್ ಪ್ರೋಟೀನ್‌ಗಳು ಅಂಗಾಂಶ ಮತ್ತು ಅಂಗಗಳಲ್ಲಿ ಠೇವಣಿಯಾದರೆ ಈ ಆರೋಗ್ಯ ಸಮಸ್ಯೆ ಎದುರಾಗುತ್ತದೆ. ಇದರಿಂದ ಅಂಗಾಂಗ ವೈಫಲ್ಯ ಉಂಟಾಗುತ್ತದೆ. 

ಮುಷರಫ್‌ ಅವರು 1999ರಿಂದ 2008ರ ವರೆಗೂ ಪಾಕಿಸ್ತಾನದಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿದ್ದರು.

ಪಾಕಿಸ್ತಾನದ ಮಾಜಿ ಪ್ರಧಾನಿ ಬೆನಿಜಿರ್‌ ಭುಟ್ಟೊ ಅವರ ಹತ್ಯೆ ಪ್ರಕರಣದಲ್ಲಿ ಮುಷರಫ್‌ ತಲೆಮರೆಸಿ ಕೊಂಡಿದ್ದರು. ದೇಶದ್ರೋಹ ಪ್ರಕರಣವನ್ನು ಎದುರಿಸುತ್ತಿರುವ ಅವರು 2016ರಿಂದ ದುಬೈನಲ್ಲಿ ವಾಸವಾಗಿದ್ದರು. 

2007ರಲ್ಲಿ ಸಂವಿಧಾನವನ್ನು ತೆಗೆದು ಹಾಕುವ ಮೂಲಕ ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಗೊಳಿಸಿದ್ದರು. ಆ ವಿಚಾರದಲ್ಲಿ ಅವರು ರಾಷ್ಟ್ರದ್ರೋಹ ಪ್ರಕರಣ ಎದುರಿಸುತ್ತಿದ್ದರು.

Leave a Reply

Your email address will not be published. Required fields are marked *

error: Content is protected !!