ಉಡುಪಿ: ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ

ಉಡುಪಿ, ಫೆ.9: ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಫೆಬ್ರವರಿ 14 ರಂದು ಕುಂದಾಪುರ ತಹಶೀಲ್ದಾರರ ಕಚೇರಿ, ಫೆ. 16 ರಂದು ಹೆಬ್ರಿ ತಹಶೀಲ್ದಾರರ ಕಚೇರಿ ಹಾಗೂ ಫೆ. 21 ಕಾಪು ಪುರಸಭೆ ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಲೋಕಾಯುಕ್ತ ಕಾಯ್ದೆಯಡಿ ದಾಖಲಾಗುವ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.

ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881 ಹಾಗೂ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 0820-2536661 ಅಥವಾ ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ. ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!