ಉಡುಪಿ: ಅಂಗವಿಕಲರಿಗೆ ಸಾಧನ ಸಲಕರಣೆ ವಿತರಣೆ

ಉಡುಪಿ, ಫೆ.9: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆ ಹಾಗೂ ಆರ್ಟಿಫಿಶಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾ(ಅಲಿಮ್ಕೋ) ಇವರ ಸಹಯೋಗದಲ್ಲಿ ಸಾಮಾಜಿಕ ಅಧಿಕಾರಿತಾ ಶಿಬಿರ ಕೇಂದ್ರ ಸರ್ಕಾರದ ವಿಶೇಷ ಅಡಿಪ್ ಯೋಜನೆಯಡಿ ವಿಕಲಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ಸಮರ್ಪಣೆ ಕಾರ್ಯಕ್ರಮವು ಫೆಬ್ರವರಿ 11 ರಂದು ಬೆಳಗ್ಗೆ 11.30 ಕ್ಕೆ ನಗರದ ಮಿಷನ್ ಕಾಂಪೌ0ಡ್ ಬೆಸೆಲ್ ಮಿಷನರೀಸ್ ಮೆಮೋರಿಯಲ್ ಆಡಿಟೋರಿಯಮ್ ನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಶಾಸಕ ಕೆ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಕೆಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ರಾಜ್ಯ ಸಚಿವ ಎ. ನಾರಾಯಣ ಸ್ವಾಮಿ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವ ಹಾಲಪ್ಪ ಬಸಪ್ಪ ಆಚಾರ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಸಂಸದ ಬಿ. ವೈ ರಾಘವೇಂದ್ರ, ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಲಾಲಾಜಿ ಆರ್ ಮೆಂಡನ್ ಮತ್ತು ಬಿ.ಎಂ ಸುಕುಮಾರ್ ಶೆಟ್ಟಿ, ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ, ಎಸ್.ಎಲ್. ಭೋಜೆಗೌಡ, ಡಾ. ತೇಜಸ್ವಿನಿ ಗೌಡ,ಮಂಜುನಾಥ ಭಂಡಾರಿ, ದಿ ಮೈಸೂರು ಎಲೆಕ್ಟಿçಕಲ್ ಇಂಡಸ್ಟಿçಸ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಚನಿಲ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಕಲ್ಮಾಡಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!