ಹೈಕೋರ್ಟ್ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ವಕೀಲ ಅರುಣ್ ಶ್ಯಾಮ್ ನೇಮಕ
ಬೆಂಗಳೂರು: ರಾಜ್ಯ ಹೈಕೋರ್ಟ್ನ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ವಕೀಲ ಅರುಣ್ ಶ್ಯಾಮ್ ಅವರನ್ನು ನೇಮಿಸಿ ಕಾನೂನು ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ.
ಈ ಹುದ್ದೆ ಆರ್.ನಟರಾಜ್ ಅವರು ನ್ಯಾಯಮೂರ್ತಿಗಳಾಗಿ ಪದೋನ್ನತಿ ಹೊಂದಿದ ನಂತರ ತೆರವಾಗಿತ್ತು. ಈಗ ಆ ಸ್ಥಾನಕ್ಕೆ ಅರುಣ್ ಶ್ಯಾಮ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜೊತೆಗೆ, ಕಲಬುರಗಿ ಪೀಠದ ಖಾಲಿ ಇರುವ ಹೆಚ್ಚುವರಿ ಅಡ್ವೊಕೇಟ್ ಜನರಲ್ ಹುದ್ದೆಗೆ ವೈ.ಎಚ್.ವಿಜಯಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಇನ್ನು ಧಾರವಾಡ ಹೈಕೋರ್ಟ್ ಪೀಠದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿರುವ ಧ್ಯಾನ್ ಚಿನ್ನಪ್ಪ ಅವರನ್ನು ಮುಂದುವರಿಸಲಾಗಿದೆ ಎಂದು ಕಾನೂನು ಇಲಾಖೆ ತಿಳಿಸಿದೆ.